Friday, 30th September 2022

ಬಸವನಗುಡಿಯ ಹೋಟೆಲ್‌ನಲ್ಲಿ ಬೆಂಕಿ ಅವಘಡ

ಬೆಂಗಳೂರು: ಬಸವನಗುಡಿ ಬಳಿಯ ನೆಟ್ಟಕಲ್ಲಪ್ಲ ವೃತ್ತದಲ್ಲಿರುವ ಹೋಟೆಲ್‌ನಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ.

ಶ್ರೀ ಗುರು ಕೊಟ್ಟೊರೇಶ್ವರ ಹೋಟೆಲ್ ಹಾಗೂ ಅದರ ಪಕ್ಕದ ಆಪ್ಟಿಕಲ್ ಮಳಿಗೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಎರಡೂ ಕಡೆ ಯಲ್ಲೂ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

‘ವಿದ್ಯುತ್ ಶಾರ್ಟ್ ಸರ್ಕಿಟ್ ಅಥವಾ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಬೆಂಕಿ ನಂದಿ ಸುವ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದರು.