Friday, 27th May 2022

ಕಾಂದಿವಲೀ: ವಸತಿ ಸಮುಚ್ಛಯದಲ್ಲಿ ಅಗ್ನಿ ಅನಾಹುತ

ಮುಂಬೈ: ಮಹಾರಾಷ್ಟ್ರದ ಕಾಂದಿವಲೀ ಉಪನಗರದ 15 ಮಹಡಿಯ ವಸತಿ ಸಮುಚ್ಛಯವೊಂದರಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

14ನೇ ಮಹಡಿಯಲ್ಲಿರುವ ಫ್ಲ್ಯಾಟ್‌ನಲ್ಲಿ ರಾತ್ರಿ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಗಾಯಗೊಂಡ ಇಬ್ಬರನ್ನು ಶತಾಬ್ಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬರು ಆಸ್ಪತ್ರೆಗೆ ದಾಖಲಿಸುವುದಕ್ಕೂ ಮೊದಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ಅಹ್ಮದ್‌ ನಗರದ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಶನಿವಾರ ಭಾರಿ ಪ್ರಮಾಣದ ಅಗ್ನಿ ಅನಾಹುತ ಸಂಭವಿಸಿ 11 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟ ಬೆನ್ನಲ್ಲೇ ಈ ಅನಾಹುತ ಸಂಭವಿಸಿದೆ.