Tuesday, 27th September 2022

ಇಂದು ನ್ಯೂಜಿಲೆಂಡ್-ಭಾರತ ಮೊದಲ ಟಿ20 ಪಂದ್ಯ ಆರಂಭ

ಜೈಪುರ: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾವು ಬುಧವಾರ ಸವಾಯ್ ಮಾನ್‌ ಸಿಂಗ್‌ ಕ್ರೀಡಾಂಗಣದಲ್ಲಿ ಮೊದಲ ಟಿ 20 ಪಂದ್ಯವನ್ನಾಡಲಿದೆ.

ನೂತನ ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಮೈದಾನ ಕ್ಕಿಳಿಯಲಿದೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಈಗಾಗಲೇ ಈ ಸರಣಿ ಯಿಂದ ಹೊರಗುಳಿದಿದ್ದಾರೆ. ನ್ಯೂಜಿಲೆಂಡ್‌ನ ವೇಗದ ಬೌಲರ್ ಸರಣಿಯಿಂದ ಹೊರ ಬಿದ್ದಿದ್ದಾರೆ.

ಭಾರತ ವಿರುದ್ಧ ಮುಂಬರುವ ಟೆಸ್ಟ್ ಸರಣಿಯತ್ತ ಗಮನಹರಿಸಲು ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಮೂರು ಪಂದ್ಯಗಳ ಟಿ-20 ಸರಣಿಯಿಂದ ಹೊರಬಿದ್ದಿದ್ದಾರೆ. ನ.25 ರಿಂದ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ತಯಾರಿ ನಡೆಸಲು ಕೈಲ್, ಟಿ-20 ಪಂದ್ಯವನ್ನಾಡುತ್ತಿಲ್ಲ.

ಕಳೆದ ಜುಲೈನಲ್ಲಿ ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ಎಂಟು ವಿಕೆಟ್‌ಗಳಿಂದ ಭಾರತ ವನ್ನು ಸೋಲಿಸುವ ಮೂಲಕ ನ್ಯೂಜಿಲೆಂಡ್ ಮೊದಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದುಕೊಂಡಿತು.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತದ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೊರಗಿದ್ದಾರೆ.