Saturday, 27th July 2024

ಫುಟ್ಬಾಲ್ ಪಂದ್ಯದ ವೇಳೆ ಸ್ಫೋಟ: 14 ಮಂದಿ ಸಾವು

ಬಲೂಚಿಸ್ತಾನ: ಫುಟ್ಬಾಲ್ ಪಂದ್ಯದ ವೇಳೆ ಸಂಭವಿಸಿದ ಸ್ಫೋಟದಲ್ಲಿ 14 ಜನರು ಗಾಯಗೊಂಡಿದ್ದಾರೆ. ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಘಟನೆ ಸಂಭವಿಸಿದೆ.

ಫುಟ್ಬಾಲ್ ಪಂದ್ಯವನ್ನು ವೀಕ್ಷಿಸುತ್ತಿದ್ದ 14 ಜನರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ತಾರಿಕ್ ಎಲಾಹಿ ಹೇಳಿದ್ದಾರೆ. ಸ್ಫೋಟದಲ್ಲಿ ಯಾವುದೇ ಫುಟ್ಬಾಲ್ ಆಟಗಾರರಿಗೆ ಗಾಯಗಳಾಗಿಲ್ಲ” ಅವರು ಹೇಳಿದರು.

ಅಪರಿಚಿತ ದುಷ್ಕರ್ಮಿಗಳು ಫುಟ್ಬಾಲ್ ಮೈದಾನದ ಗೋಡೆಯ ಪಕ್ಕದಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇಟ್ಟಿದ್ದರು ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದರು. ಸಧ್ಯ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಮಧ್ಯೆ ಇದುವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯು ಸ್ಫೋಟದ ಜವಾಬ್ದಾರಿಯನ್ನು ಹೊತ್ತಿಲ್ಲ.

ಬಲೂಚಿಸ್ತಾನದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದ್ದು , ಕಳೆದ ವರ್ಷ ಹಲವಾರು ಹಿಂಸಾಚಾರದ ಘಟನೆಗಳು ವರದಿಯಾಗಿದೆ ಎಂದು ಡಾನ್ ವರದಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!