Saturday, 10th June 2023

ಚೀನಾದ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್

ಹಾಂಗ್ ಕಾಂಗ್: ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗು ತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚೀನಾ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಿರುವುದಾಗಿ ವರದಿ ತಿಳಿಸಿದೆ.

ಅ.17ರ ನಂತರ ಚೀನಾದ ಸ್ಥಳೀಯ ಪ್ರದೇಶಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣ ದಿಢೀರನೆ ಹೆಚ್ಚಳವಾಗತೊಡಗಿದೆ. ಇದರಿಂದಾಗಿ ಮತ್ತೆ ಲಾಕ್ ಡೌನ್ ಜಾರಿಗೊಳಿಸುತ್ತಿರುವುದಾಗಿ ರಾಷ್ಟ್ರೀಯ ಆರೋಗ್ಯ ಆಯೋಗದ ವಕ್ತಾರ ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳ ಹೆಚ್ಚಳ ಹೆಚ್ಚು ಅಪಾಯಕಾರಿಯಾಗಿದ್ದು, ಇದು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮ ತೆಗೆದು ಕೊಳ್ಳುತ್ತಿದ್ದೇವೆ ಎಂದು ತಿಳಿಸಿರುವುದಾಗಿ ಸಿಎನ್ ಎನ್ ವರದಿ ಮಾಡಿದೆ.

ಚೀನಾ ಶೇ.75ರಷ್ಟಿ ಜನಸಂಖ್ಯೆಯ ಮೇಲೆ ಸೋಂಕು ಪರಿಣಾಮ ಬೀರದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ದೇಶದಲ್ಲಿ ಈಗಾಗಲೇ ಕೋಟ್ಯಂತರ ಜನರಿಗೆ ಲಸಿಕೆ ನೀಡಲಾಗಿದೆ ಎಂದು ವರದಿ ಹೇಳಿದೆ.

error: Content is protected !!