Sunday, 27th November 2022

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿದ ಗೆಹ್ಲೋಟ್‌

ಜೈಪುರ: ರಾಜಸ್ಥಾನದ ಶಾಸಕರ ರಾಜೀನಾಮೆ ಘಟನೆ ನನ್ನನ್ನು ಮಾತ್ರವಲ್ಲ, ಪಕ್ಷವನ್ನು ಕಂಗೆಡಿಸಿದೆ.

ಈ ಹಿನ್ನೆಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಯಾಗಿ ಮುಂದುವರಿಯಲಿದ್ದು, ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಸ್ಪರ್ಧೆ ಯಿಂದ ಹಿಂದೆ ಸರಿದಿದ್ದೇನೆ ಎಂದು ಅಶೋಕ್‌ ಗೆಹ್ಲೋಟ್‌ ಘೋಷಿಸಿದರು.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಘೋಷಣೆ ಮಾಡಿದ್ದಾರೆ.

ಗುರುವಾರ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಸ್ಥಾನದಲ್ಲಿ 90 ಶಾಸಕರ ರಾಜೀನಾಮೆ ಘಟನೆ ಕುರಿತು ಕ್ಷಮೆಯಾಚಿಸಿರುವುದಾಗಿ ತಿಳಿಸಿದ್ದಾರೆ.

ಅಶೋಕ್‌ ಗೆಹ್ಲೋಟ್‌ ಘೋಷಣೆ ಹಿನ್ನೆಲೆಯಲ್ಲಿ ಇದೀಗ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್‌ ಮತ್ತು ದಿಗ್ವಿಜಯ್‌ ಸಿಂಗ್‌ ನಡುವೆ ಪೈಪೋಟಿ ಏರ್ಪಡಲಿದೆ. ಸೆ.೩೦ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.