Monday, 30th January 2023

ಗೋವಾದಲ್ಲಿ ಕರ್ಫ್ಯೂ ಆ.30 ರ ವರೆಗೆ ವಿಸ್ತರಣೆ

ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆ.30 ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಗೋವಾ ರಾಜ್ಯದಲ್ಲಿ ಕೋವಿಡ್‌ ಹರಡುವುದನ್ನು ತಡೆಯಲು ಮಾರ್ಚ್ ತಿಂಗಳಿಂದ ಜಾರಿಗೊಂಡಿದ್ದ ಕರ್ಫ್ಯೂ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ಜಾರಿಯಲ್ಲಿದ್ದ ಕರ್ಫ್ಯೂ ಸೋಮವಾರ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಕರ್ಫ್ಯೂ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೇರಳದಿಂದ ಆಗಮಿಸುವ ಪ್ರವಾಸಿಗರಿಗೆ ಗೋವಾ ರಾಜ್ಯ ಪ್ರವೇಶಿಸಲು ಆರ್‍ಟಿಪಿಸಿಆರ್ ನೆಗೆಟಿವ್ ವರದಿ ಖಡ್ಡಾಯಗೊಳಿಸಲಾಗಿದ್ದು, ಇತರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ಪ್ರವಾಸಿಗರಿಗೆ ಕೋವಿಡ್ ಎಂಟಿಜನ್ ನೆಗೆಟಿವ್ ವರದಿ ಹೊಂದಿರುವುದು ಖಡ್ಡಾಯವಾಗಿದೆ.

ಚಿತ್ರಮಂದಿರಗಳಲ್ಲಿ ಶೇ 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಮೂಲಕ ಚಿತ್ರಮಂದಿರ ತೆರೆಯಲು ಅನುಮತಿ ನೀಡಲಾಗಿದೆ.

 

error: Content is protected !!