ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಬುಧವಾರದಿಂದ ರಾಜ್ಯಾದ್ಯಂತ ಅನಿರ್ದಿಷ್ಟಾ ವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಆದರೆ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ.
ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಹಿಡಿಯಲು ರಾಜ್ಯ ಸರ್ಕಾರವು ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಈ ಮೂಲಕ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ.
ಮುಷ್ಕರ ಕೈಬಿಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದ್ದರೂ, ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆ ಹಿಡಿಯಲು ರಾಜ್ಯ ಸರ್ಕಾರ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಸಾರಿಗೆ ನೌಕರರಿಗೆ ಪ್ರತಿ ತಿಂಗಳ 10 ನೇ ತಾರೀಖು ಸಂಬಳವಾಗುತ್ತಿತ್ತು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ