Tuesday, 26th October 2021

ವಿಜೃಂಭಣೆಯ ಮಲೆ ಮಹದೇಶ್ವರ ಸ್ವಾಮಿಯ ಶಿವರಾತ್ರಿ ಜಾತ್ರೆಯ ರಥೋತ್ಸವ

ಮಹದೇಶ್ವರ ಬೆಟ್ಟ: ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿಯ ಶಿವರಾತ್ರಿ ಜಾತ್ರೆಯ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು.

ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯರಿಗೆ ಮಾತ್ರ ಜಾತ್ರೆಯಲ್ಲಿ ಭಾಗವಹಿಸಲು ಅವಕಾಶ‌ ನೀಡಲಾಗಿತ್ತು. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಮಹದೇಶ್ವರ ಬೆಟ್ಟ ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಸಾವಿರಾರು ಜನರು ರಥೋತ್ಸವದಲ್ಲಿ ಪಾಲ್ಗೊಂಡು ತೇರನ್ನು ಎಳೆದರು.

Leave a Reply

Your email address will not be published. Required fields are marked *