Tuesday, 21st March 2023

ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನ ಐದು ಸಾವಿರ ರೂ.ಹೆಚ್ಚಲಿ: ಹೆಚ್.ಡಿ.ಕೆ ಆಗ್ರಹ

ಬೆಂಗಳೂರು: ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬಾಕಿಯಿರುವ ಮಾಸಿಕ ಗೌರವಧನ ತಕ್ಷಣವೇ ನೀಡಬೇಕು, ಮತ್ತು ಇದನ್ನು ಕನಿಷ್ಠ ಐದು ಸಾವಿರಕ್ಕೆ ಏರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸರ್ಕಾರ ಭರವಸೆ ನೀಡಿದ್ದಂತೆ ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಕನಿಷ್ಠ ಐದು ಸಾವಿರ ರೂಪಾಯಿ ಹೆಚ್ಚಳ ಮಾಡಬೇಕು. ಲಾಕ್ ಡೌನ್ ಸಂದರ್ಭದಲ್ಲಿ ತಡೆಹಿಡಿದಿದ್ದ ಗೌರವ ಧನದ ಬಾಕಿಯನ್ನು ತಕ್ಷಣವೇ ನೀಡಬೇಕು ಎಂದಿದ್ದಾರೆ.

ಸುಮಾರು ಹದಿನೈದು ಸಾವಿರ ಅತಿಥಿ ಉಪನ್ಯಾಸಕರು ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಜೆಪಿ ಸರ್ಕಾರ 15000 ರೂ.ಗಳ ಮಾಸಿಕ ಗೌರವಧನ ನೀಡುವ ಭರವಸೆ ಯನ್ನು ಕೂಡಲೇ ಜಾರಿ ಮಾಡಬೇಕು ಎಂದಿದ್ದಾರೆ. ಕಳೆದ ಸಲದ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದ ಎಲ್ಲರನ್ನೂ ಮತ್ತೆ ಮರು ನೇಮಕ ಮಾಡಿಕೊಳ್ಳುವ ಮೂಲಕ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ನೆರವಾಗಬೇಕು ಎಂದು ಎಚ್ ಡಿಕೆ ಒತ್ತಾಯಿಸಿದ್ದಾರೆ.

error: Content is protected !!