Sunday, 29th November 2020

ಡಿ.5 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ: ಬಸವರಾಜ ಹೊರಟ್ಟಿ

ಧಾರವಾಡ: ನಗರದಲ್ಲಿನ ಎನ್.ಎ.ಮುತ್ತಣ್ಣ ಪೊಲೀಸ್ ಮಕ್ಕಳ ವಸತಿ ಶಾಲೆಯ ಶಿಕ್ಷಕರ ವೇತನ ಬಿಡುಗಡೆ ಮಾಡುವುದರ ಜೊತೆಗೆ ಆ ಶಾಲೆ ಆರಂಭಿಸಲು ಅನುಮತಿ ನೀಡಬೇಕೆಂದು ಆಗ್ರಹಿಸಿ ಡಿ.5 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020-21 ನೇ ಸಾಲಿನಲ್ಲಿ 125 ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 80 ವಿದ್ಯಾರ್ಥಿಗಳು ಪ್ರವೇಶ ಪಡೆದು ಆನ್ ಲೈನ್ ತರಗತಿಗಳಿಗೆ ಹಾಜರಾಗಿದ್ದಾರೆ. ಆದರೆ ಕಳೆದ 9 ತಿಂಗಳಿಂದ ಈ ಶಾಲೆಯ ಶಿಕ್ಷಕರಿಗೆ ವೇತನ ನೀಡಿಲ್ಲ, ಇದರಿಂದಾಗಿ ಶಿಕ್ಷಕರು ಜೀವನ ನಡೆಸುವುದು ಅತ್ಯಂತ ಕಷ್ಟದಾಯಕವಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಶಾಲೆ ಸುಸ್ಥಿರ ಅಭಿವೃದ್ಧಿ ಕಾಣಬೇಕೆಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಹಾಗೂ ಶಾಲೆಯ ಅನುದಾನ ಬಿಡುಗಡೆ ಮಾಡಲು ಕೋರಿದ್ದೆವು, ಆದರೆ ಈವರೆಗೂ ಯಾವುದೇ ಸ್ಪಂದನೆ ಲಭಿಸಿಲ್ಲ. ಈ ಕಾರಣ ದಿಂದ ಬೇಸತ್ತು ಡಿ.5 ರಂದು ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೊರಟ್ಟಿ ಹೇಳಿದರು.

Leave a Reply

Your email address will not be published. Required fields are marked *