Thursday, 23rd March 2023

ಕೋರ್ಟ್ ಆದೇಶಕ್ಕೆ ತಲೆಬಾಗಿ ಬಂದಿದ್ದೇನೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಮಂಗಳೂರು: ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಇಂಧನ ಸಚಿವರಾಗಿದ್ದ ವೇಳೆ ವಿದ್ಯುತ್ ಕೇಳಿ ಕರೆ ಮಾಡಿದ ವ್ಯಕ್ತಿಯ ಜೊತೆ ವಾಗ್ವಾದ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳಲು ಡಿ. ಕೆ. ಶಿವಕುಮಾರ್ ಆಗಮಿಸಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳವಾರ ಮಂಗಳೂರು ಅಂತರಾ ಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ ದರು.

“ನಾನು ಇಂಧನ ಸಚಿವನಾಗಿದ್ದಾಗ ಯಾರೋ ಒಬ್ಬ ತರ್ಲೆ ಫೋನ್ ಮಾಡಿದ್ದ. ನನ್ನ ಜೊತೆ ಬಾಯಿಗೆ ಬಂದ ಹಾಗೆ ಮಾತ ನಾಡಿದ್ದ. ಅವಾಚ್ಯ ಶಬ್ದಗಳಿಂದ ನನಗೆ ಬೈದಿದ್ದ. ನಮ್ಮ ಅಧಿಕಾರಿಗಳು ಅವನ ವಿರುದ್ದ ದೂರು ನೀಡಿದ್ದರು. ಅಧಿಕಾರಿಗಳಿಗೂ ಬಾಯಿಗೆ ಬಂದ ಹಾಗೇ ಬೈದಿದ್ದ. ಸಾಕ್ಷಿಯಾಗಿ ಬರಬೇಕು ಅಂತಾ ನ್ಯಾಯಾಲಯ ಹೇಳಿತ್ತು. ಪ್ರಾರಂಭದಲ್ಲಿ ನನಗೂ ಈ ಬಗ್ಗೆ ಗೊತ್ತಾಗಲಿಲ್ಲ. ನಮಗೆಲ್ಲಾ ಈ ವಿಚಾರದಲ್ಲಿ ಸ್ವಲ್ಪ ತಿಳುವಳಿಕೆ‌ ಕಡಿಮೆ. ಲುಕ್ ಔಟ್ ನೋಟಿಸ್, ಪೇಪರ್‌ನಲ್ಲಿ ಹಾಕ್ತೇವೆ ಎಂದು ಆರ್ಡರ್ ಮಾಡಿದ್ದಾರೆ ಅಂತಾ ಗೊತ್ತಾಯ್ತು. ಕೋರ್ಟ್ ಆದೇಶಕ್ಕೆ ತಲೆಬಾಗಿ ಬಂದಿದ್ದೇನೆ ಎಂದು ಹೇಳಿದರು.

ಬಿಜೆಪಿ ಸರ್ಕಾರದ್ದು ಅತಿಯಾಗುತ್ತಿದೆ. ರಾಜ್ಯದಲ್ಲಿ ಕಾನೂನು ಹೋಗಿದೆ. ಪೊಲೀಸರು ಕೆಲಸ ಮಾಡುತ್ತಿಲ್ಲ. ಪೊಲೀಸರ ಕೆಲಸ ವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ. ಅಧಿಕಾರವನ್ನು ಕಾರ್ಯಕರ್ತರು ಮಾಡುತ್ತಿದ್ದಾರೆ. ಇದು ಸದ್ಯದ ಸ್ಥಿತಿಯನ್ನು ತೋರಿಸುತ್ತಿದೆ” ಎಂದರು.

ಉತ್ತರ ಪ್ರದೇಶದಲ್ಲಿ ರೈತ ಹೋರಾಟದ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಗ್ಗೆ, ದೇಶದಲ್ಲಿ ಕಾನೂನೇ ಇಲ್ಲ. ಪ್ರತಿಭಟನೆ, ಹೋರಾಟ ಮಾಡುವುದು ಅವರವರ ಹಕ್ಕು. ಗಾಂಧೀಜಿ ಅಹಿಂಸೆಯ ಮೂಲಕ ಹೋರಾಟ ಮಾಡಿ ಅಂತಾ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಕೇಂದ್ರ ಸಚಿವರ ಮಗ, ಉಪಮುಖ್ಯಮಂತ್ರಿ ಮಗ ಪ್ರತಿಭಟನಾಕಾರರನ್ನು ಕೊಲೆ ಮಾಡಿದ್ದಾರೆ. ಈ ಘಟನೆಯಲ್ಲಿ 4 ಜನ ಸತ್ತಿದ್ದಾರೆ. ಹೋರಾಟ ಮಾಡುತ್ತಿದ್ದವರನ್ನು ಗಾಡಿ ಹತ್ತಿಸಿ ಕೊಂದಿದ್ದಾರೆ. ಇವತ್ತಿಗೂ ಅವರನ್ನು ಅರೆಸ್ಟ್ ಮಾಡಿಲ್ಲ, ಮಂತ್ರಿಯ ರಾಜೀನಾಮೆಯನ್ನು ಸರ್ಕಾರ ಪಡೆದಿಲ್ಲ ಎಂದು ಆರೋಪಿಸಿದರು.

ಸುಳ್ಯಕ್ಕೆ ತೆರಳಿದ ಡಿ. ಕೆ. ಶಿವಕುಮಾರ್ ಮಧ್ಯಾಹ್ನದ ವೇಳೆಗೆ ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.

2016ರ ಫೆಬ್ರವರಿ 28ರಂದು ಸುಳ್ಯ ತಾಲೂಕಿನ‌ ಬೆಳ್ಳಾರೆ ನಿವಾಸಿ, ಬೆಳ್ಳಾರೆಯ ವರ್ತಕ ಸಂಘದ ಮಾಜಿ ಅಧ್ಯಕ್ಷ, ಸಾಯಿ ಗಿರಿಧರ್ ರೈ ತನ್ನೂರಿನಲ್ಲಿ ನಿರಂತರವಾಗಿ ಕಾಡುತ್ತಿದ್ದ ವಿದ್ಯುತ್ ಸಮಸ್ಯೆ ಬಗ್ಗೆ ಆಗಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್‌ಗೆ ದೂರವಾಣಿ ಕರೆ ಮಾಡಿ ವಿದ್ಯುತ್ ಸಮಸ್ಯೆ ಬಗ್ಗೆ ಸಚಿವರ ಬಳಿ ಹೇಳಿದ್ದರು.

 

error: Content is protected !!