Tuesday, 26th October 2021

ಕಲ್ಯಾಣ ಕರ್ನಾಟಕ ಉತ್ಸವದ ಅಚ್ಚುಕಟ್ಟು ಆಚರಣೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸೂಚನೆ

ಕೊಪ್ಪಳ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಸೆ. 17ರಂದು ಸಂಭ್ರಮದಿಂದ ಆಚರಿಸಬೇಕು ಹಾಗೂ ಕೋವಿಡ್-19 ಹಿನ್ನೆಲೆ ಅಷ್ಟೇ ಜಾಗರೂಕತೆಯ ಕ್ರಮಗಳನ್ನು ಕೈಗೊಂಡು, ಅಚ್ಚುಕಟ್ಟು ಆಚರಣೆಗೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್  ಅಧಿಕಾರಿಗಳಿಗೆ ಸೂಚಿಸಿ ದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಉತ್ಸವ ದಿನಾ ಚರಣೆಯಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು.

ಕೋವಿಡ್-19 ಹಿನ್ನೆಲೆ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಮಾರಂಭ ವನ್ನು ಸರಳವಾಗಿ ಆಚರಿಸುವ ಪ್ರಯುಕ್ತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಿ. ಕಾರ್ಯಕ್ರಮದಲ್ಲಿ ಯಾವುದೇ ಅಡೆತಡೆಗಳು ಆಗದಂತೆ ನಿಗದಿತ ಸಮಯಕ್ಕೆ ಕಾರ್ಯಕ್ರಮಗಳು ನಡೆಯುವಂತೆ ಸಂಬಂಧಪಟ್ಟ ಅಧಿಕಾರಿ ಗಳು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು. ಆರೋಗ್ಯ ಇಲಾಖೆಯವರು ಕ್ರೀಡಾಂಗಣಕ್ಕೆ ಬರುವ ಎಲ್ಲರಿಗೂ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ವ್ಯವಸ್ಥೆ ಮಾಡಬೇಕು.

ನಗರಸಭೆಯವರು ಸ್ವಚ್ಛತೆ ಕುರಿತು ಕ್ರಮ ಕೈಗೊಳ್ಳಬೇಕು. ಪೊಲೀಸ್ ಭದ್ರತೆ ಹಾಗೂ ವಿದ್ಯುತ್ ಅಲಂಕಾರ ಮುಂತಾದವುಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ, ಜಿ.ಪಂ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡ ಬಸಪ್ಪ ನೀರಲಕೇರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *