Tuesday, 5th July 2022

ಕೆನಡಾ ಸಂಸತ್ತಿನಲ್ಲಿ ಕನ್ನಡಿಗ ಸಂಸದನಿಂದ ಮಾತೃಭಾಷೆ ಪ್ರೇಮ

ಬೆಂಗಳೂರು: ಕೆನಡಾ ಸಂಸತ್ತಿನಲ್ಲಿ, ಕನ್ನಡಿಗ ಸಂಸದ ಚಂದ್ರ ಆರ್ಯ ಅವರು, ತಮ್ಮ ಮಾತೃ ಭಾಷೆಯ ಪ್ರೇಮ ತೋರಿದ್ದಾರೆ. ಸಂಸತ್ ನಲ್ಲಿ ಕನ್ನಡದಲ್ಲಿಯೇ ಮಾತನಾಡಿ, ಕನ್ನಡದ ಕಲರವನನ್ನು ಕೆನಡಾ ಸಂಸತ್ ನಲ್ಲಿ ಉಂಟು ಮಾಡಿದ್ದಾರೆ.

ನಮಸ್ಕಾರ, ನಾನು ಇಂದು ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ. ಅವರು ಕೆನಡಾ ಸಂಸತ್ ನಲ್ಲಿ ಕನ್ನಡದಲ್ಲೇ ಏನ್ ಮಾತನಾಡಿದರು ಎನ್ನುವಂತ ಅವರ ಭಾಷಣದ ಸಾರಾಂಶ ಈ ಕೆಳಗಿನಂತಿದೆ.

ಮಾನ್ಯ ಸಭಾಪತಿ,

ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತದ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಸಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು ಸುಮಾರು ಐದು ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ. ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಮತ್ತು ನಟಸಾರ್ವಭೌಮ ಡಾ. ರಾಜಕುಮಾರ್ ಹಾಡಿರುವ ಭಾವಗೀತೆಯ ಕೆಲವು ಪದಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತಿದ್ದೇನೆ.

ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು..ಧನ್ಯವಾದಗಳು ಸಭಾಪತಿ ಎಂದು ತಮ್ಮ ಮಾತು ಮುಗಿಸಿದ್ದಾರೆ.