Friday, 7th October 2022

ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಕನ್ನಡದಲ್ಲೇ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಕನ್ನಡದಲ್ಲೇ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ನಮನ ಸಲ್ಲಿಸಿದ್ದಾರೆ.

ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.