Tuesday, 26th October 2021

ಕರ್ನಾಟಕ ಜಾನಪದ ಅಕಾಡೆಮಿ ರಾಜ್ಯಮಟ್ಟದ ಪ್ರಶಸ್ತಿ ಪ್ರಕಟ

ಚಾಮರಾಜನಗರ: ಕರ್ನಾಟಕ ಜಾನಪದ ಅಕಾಡೆಮಿ 2020ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ಗೌರವ ಪ್ರಶಸ್ತಿ ಮತ್ತು ಜಾನಪದ ತಜ್ಞ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟಿಸಿದೆ.

ಚಾಮರಾಜನಗರದಲ್ಲಿ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ.ಮಂಜಮ್ಮ ಜೋಗತಿ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಪ್ರಮುಖವಾಗಿ ಡಾ.ಜೀ.ಶಂ.ಪ. ಜಾನಪದ ತಜ್ಞ ಪ್ರಶಸ್ತಿಗೆ ಮಂಗಳೂರಿನ ಡಾ,ಗಾಯತ್ರಿನಾವಡ, ಹಾಗು ಡಾ.ಗದ್ದಗೀಮಠ ಜಾನಪದ ಪ್ರಶಸ್ತಿಗೆ ಕಲಬುರ್ಗಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಡಾ.ಬಸವರಾಜು ಸಬರದ ಆಯ್ಕೆ ಯಾಗಿದ್ದಾರೆ.

ಉಳಿದಂತೆ, ರಾಜ್ಯದ ಮೂವತ್ತು ಜಿಲ್ಲೆಗಳ 30 ಹಿರಿಯ ಜಾನಪದ ಕಲಾವಿದರು ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜಾನಪದ ತಜ್ಞ ಪ್ರಶಸ್ತಿ ಪುರಸ್ಕೃತರಿಗೆ ತಲಾ 50 ಸಾವಿರ ರೂಪಾಯಿ ನಗದು ಹಾಗು ಸ್ಮರಣ ಫಲಕ ಮತ್ತು ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರಿಗೆ ತಲಾ 30 ಸಾವಿರ ರೂಪಾಯಿ ನಗದು ಹಾಗು ಸ್ಮರಣ ಫಲಕವನ್ನು ನೀಡಿ ಗೌರವಿಸಲಾಗುವುದು ಎಂದು ಜಾನಪದೆ ಅಕಾಡೆಮೆ ಅಧ್ಯಕ್ಷೆ ಮಾತಾ ಬಿ.ಮಂಜಮ್ಮ ಜೋಗತಿ ತಿಳಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರವರಿ ತಿಂಗಳಲ್ಲಿ ಚಾಮರಾಜ ನಗರದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಕರ್ನಾಟಕ ಜಾನಪದ ಅಕಾಡೆಮಿ 1980 ರಿಂದ 2019ರವರೆಗೆ 963 ಜಾನಪದ ಕಲಾವಿದರಿಗೆ ಹಾಗು 105 ಮಂದಿ ವಿದ್ವಾಂಸರು ಸೇರಿ ದಂತೆ 1068 ಮಂದಿಗೆ ಗೌರವ ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ ಎಂದು ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ತಿಳಿಸಿದರು.

Leave a Reply

Your email address will not be published. Required fields are marked *