Friday, 7th October 2022

ಯಂತ್ರಕ್ಕೆ ಸಿಲುಕಿ ಯುವತಿ ಸಾವು

ಬೆಂಗಳೂರು : ನಗರದ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ದುರಂತ ಸಂಭವಿಸಿದ್ದು, ಯಂತ್ರಕ್ಕೆ ಸಿಲುಕಿ ಯುವತಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್. ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ದುರಂತ ಸಂಭವಿಸಿದ್ದು, ಯುವತಿ ಶಾಜಿಯಾ (28) ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಮಾಲೀಕನ ಬೇಜವಾಬ್ದಾರಿಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಮಾಲೀಕ ಜೀಶಾಮ್ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.