Tuesday, 18th January 2022

ತಿರುಮಲದಲ್ಲಿ ಮತ್ತೆ ಭೂ ಕುಸಿತ: ಸಂಚಾರ ತಾತ್ಕಾಲಿಕ ಸ್ಥಗಿತ

#Tirumala

ತಿರುಪತಿ: ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಮತ್ತೆ ಭೂ ಕುಸಿತ ಸಂಭವಿ ಸಿದ್ದು, ಪರಿಣಾಮ ಘಾಟ್ ರಸ್ತೆಗಳು ಹಾನಿಗೊಳ ಗಾಗಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ತಿರುಮಲ ಬೆಟ್ಟಕ್ಕೆ ಹೋಗುವ ಹೆದ್ದಾರಿಯ ಮೂರು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಘಾಟ್ ನಂಬರ್ 2ರಲ್ಲಿ ಸಂಪೂರ್ಣ ರಸ್ತೆ ಸಂಚಾರ ಸ್ಥಗಿತ ಗೊಳಿಸಲಾಗಿದೆ. ಪರಿಣಾಮ ತಿರುಪತಿಯಿಂದ ತಿರುಮಲಕ್ಕೆ ಹೋಗುವ ಮಾರ್ಗ ದಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಘಟನೆಯ ಸಮಯದಲ್ಲಿ ವಾಹನ ದಟ್ಟಣೆ ಇಲ್ಲದ ಕಾರಣ, ಅನಾಹುತ ತಪ್ಪಿದೆ.

ರಸ್ತೆ ಹಾಳಾಗಿದ್ದರಿಂದ ತಿರುಮಲಕ್ಕೆ ತೆರಳುವ ವಾಹನಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ರಸ್ತೆ ದುರಸ್ತಿಯಾಗುವವರೆಗೂ ಸಂಚಾರಕ್ಕೆ ಅನುಮತಿ ಇಲ್ಲ ಎನ್ನಲಾಗಿದೆ.