Friday, 2nd December 2022

ಮೂವರು ಲಷ್ಕರ್-ಎ-ತೋಯ್ಬಾ ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಜುಮಗುಂಡ್ ಗ್ರಾಮದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೋಯ್ಬಾ ಉಗ್ರರನ್ನು ಹತ್ಯೆ ಮಾಡಲಾಗಿದೆ.

ಘಟನಾ ಸ್ಥಳದಿಂದ ಪೊಲೀಸರು ಶಸ್ತ್ರಾಸ್ತ್ರಗಳು ಹಾಗೂ ಸ್ಟೋಟಕ ಸಾಮಾಗ್ರಿ ಗಳನ್ನು ವಶಪಡಿಸಿಕೊಂಡಿದ್ದಾರೆ. ಲಷ್ಕರ್-ಎ-ತೋಯ್ಬಾಗೆ ಸೇರಿದ ಮೂವರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ.

ವೈಯಕ್ತಿಕ ಗುರುತು ಇನ್ನೂ ಪತ್ತೆ ಯಾಗಿಲ್ಲ. ಉಗ್ರರಿಂದ ಶಸ್ತ್ರಾಸ್ತ್ರಗಳು, ಮದ್ದು-ಗುಂಡುಗಳು ಸೇರಿದಂತೆ ಸ್ಫೋಟಕ ಸಾಮಗ್ರಿ ಗಳನ್ನು ವಶಪಡಿಸಿಕೊಳ್ಳಲಾಗಿದೆ .

ಜುಮಗುಂಡ್ ಗ್ರಾಮದಲ್ಲಿ ಉಗ್ರರ ಒಳನುಸಳುವಿಕೆ ಪ್ರಯತ್ನಗಳ ಬಗ್ಗೆ ಕುಪ್ವಾರ್ ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಪ್ರಾರಂಭವಾಯಿತು.

ಪಾಕಿಸ್ತಾನದ ಮೂವರು ಉಗ್ರರು ಬಾರಾಮುಲ್ಲ ಪ್ರದೇಶದಲ್ಲಿ ಸಕ್ರಿಯವಾಗಿ ಇರುವ ಬಗ್ಗೆ ಮಾಹಿತಿ ಲಭ್ಯವಿತ್ತು. ಬುಧವಾರ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಒಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.