Friday, 24th March 2023

ದ.ಕ ಜಿಲ್ಲೆಯಲ್ಲಿ ಜೂ.20ರವರೆಗೂ ಲಾಕ್‌ಡೌನ್‌

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಸಿರುವ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಜೂ.20ರವರೆಗೂ ದ.ಕ ಜಿಲ್ಲೆ ಲಾಕ್‌ಡೌನ್‌ಗೆ ನಿರ್ಧಾರ ಮಾಡುವ ಸಾಧ್ಯತೆ ಗಳಿವೆ. ಇನ್ನೂ ಒಂದು ವಾರ ಕಟ್ಟುನಿಟ್ಟಿನ ಕ್ರಮ ಬೇಕಾಗಿದೆ. ರಾಜ್ಯದಲ್ಲಿ ಅನ್‌ಲಾಕ್ ಆದರೂ, ಜಿಲ್ಲಾ ಮಟ್ಟದಲ್ಲಿ ಲಾಕ್‌ಡೌನ್ ಮಾಡ ಬೇಕಿದೆ.

ಮಂಗಳೂರು, ಬಂಟ್ವಾಳ ತಾಲೂಕು ಹೊರತುಪಡಿಸಿ ಬೇರೆ ತಾಲೂಕುಗಳಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿಲ್ಲ. ಜಿಲ್ಲೆಯೊಳಗೆ ಎಲ್ಲಾ ತಾಲೂಕು ಮಟ್ಟದಲ್ಲಿ ಬಿಗಿ ಕ್ರಮ ಅಗತ್ಯವಿದೆ ಅಂತ ಜಿಲ್ಲಾಧಿಕಾರಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮಾಹಿತಿ ನೀಡಿದ್ದಾರೆ. ಪಾಸಿಟಿವಿಟಿ ರೇಟ್ ಕಡಿಮೆಯಾಗದ ಹಿನ್ನೆಲೆ, ಜಿಲ್ಲೆಯಲ್ಲಿ ಇನ್ನೊಂದಿಷ್ಟು ದಿನ ಕಠಿಣ ನಿಯಮ ಜಾರಿಗೆ ಅವಕಾಶ ಮಾಡಿ ಕೊಡಲು‌ ಮನವಿ ಮಾಡಿದ್ದಾರೆ.

ತಾಲ್ಲೂಕಿನಿಂದ ತಾಲ್ಲೂಕಿಗೆ ಹೋಗಲು ನಿರ್ಬಂಧ ವಿಧಿಸಬೇಕು. ಕಂಟೈನ್ಮೆಂಟ್ ಝೋನ್‌ನಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡ ಬೇಕಿದೆ.

error: Content is protected !!