ಸಿಎಂ ಬದಲಾವಣೆ, ಸಂಪುಟ ಪುನಾರಚನೆಯ ಪ್ರಸ್ತಾಪವಿಲ್ಲ
ಬದಲಾವಣೆ ಬಗ್ಗೆ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ.

ಇದೇ ವೇಳೆ, ವಜಾಗೊಂಡಿದ್ದ ಕೆಎಸ್ಆರ್ಟಿಸಿ ಸಿಬ್ಬಂದಿಯನ್ನು 4 ವಾರದೊಳಗೆ ಮರುನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಷ್ಕರ ವೇಳೆ ಕೆಲವರು ಕೆಲಸಕ್ಕೆ ಗೈರಾಗಿದ್ದರು. ಅಂಥವರನ್ನ ಕೆಲಸದಿಂದ ವಜಾ ಮಾಡಲಾಗಿತ್ತು. ಲೋಕ ಅದಾಲತ್ ಮೂಲಕ ಕಾನೂನು ತೊಡಕು ನಿವಾರಿಸಿ ಸಮಸ್ಯೆ ಇತ್ಯರ್ಥ ಮಾಡಲಾಗುತ್ತದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.
ಸಿಎಂ ಬದಲಾವಣೆ, ಸಂಪುಟ ಪುನಾರಚನೆಯ ಪ್ರಸ್ತಾಪವಿಲ್ಲ. ಬದಲಾವಣೆ ಬಗ್ಗೆ ನಾಯಕರು ನಿರ್ಧಾರ ತೆಗೆದು ಕೊಳ್ಳುತ್ತಾರೆ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ನಾನು ಡಿಸಿಎಂ ಆಗುವ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.
ಮತಾಂತರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮದುವೆ, ಶಿಕ್ಷಣ, ಹಣ, ಉಡುಗೊರೆ ಮೂಲಕ ಮತಾಂತರ ಮಾಡಿಸಿದರೆ ಅದು ಕಾನೂನು ಬಾಹಿರ. ಎಸ್ಸಿ, ಎಸ್ಟಿ ಸಮುದಾಯದ ಹಿತ ರಕ್ಷಣೆಗೆ ಸರ್ಕಾರ ಬದ್ಧ ಎಂದು ಅಭಿಪ್ರಾಯಪಟ್ಟರು.