Thursday, 11th August 2022

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಆಸ್ಪತ್ರೆಯಿಂದ ಬಿಡುಗಡೆ

ಮುಂಬೈ: ಕರೋನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಬುಧವಾರದಂದು ಮುಂಬೈನ ಎನ್.ಹೆಚ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಉಲ್ಬಣಿಸಿದರ ಮಧ್ಯೆ ರಾಜ್ಯಪಾಲರಿಗೆ ಕರೋನಾ ಕಾಣಿಸಿಕೊಂಡಿತ್ತು. ಹೀಗಾಗಿ, ರಾಜಕೀಯ ಬೆಳವಣಿಗೆ ವೇಳೆ ಸರ್ಕಾರದ ಬಹುಮತ ಕುರಿತು ಪ್ರಮುಖ ಪಾತ್ರ ವಹಿಸಬೇಕಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರಿಂದ ಅನಿಶ್ಚಿ ತತೆ ಮೂಡಿತ್ತು.

ಈಗ ಕರೋನಾದಿಂದ ಚೇತರಿಸಿಕೊಂಡಿರುವ ಅವರು ರಾಜಭವನಕ್ಕೆ ಮರಳಿದ್ದಾರೆ. ಹೀಗಾಗಿ, ಪ್ರಸ್ತುತ ರಾಜ್ಯದಲ್ಲಿ ನಡೆಯು ತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ನಾಳೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.