Friday, 30th September 2022

ರಾಜ್ಯಸಭೆ ವಿಪಕ್ಷ ನಾಯಕನಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಗುಲಾಂ ನಬಿ ಆಜಾದ್ ಸೇರಿದಂತೆ ನಾಲ್ವರು ರಾಜ್ಯಸಭಾ ಸದಸ್ಯರು ನಿವೃತ್ತರಾಗುತ್ತಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ನಿವೃತ್ತರಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ವಿದಾಯ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಗುಲಾಂ ನಬಿ ಆಜಾದ್ ಬಗ್ಗೆ ಪ್ರಸ್ತಾಪಿಸುವಾಗ ಭಾವುಕರಾದರು.

ಸದಸ್ಯತ್ವದಿಂದ ನಿವೃತ್ತಿಯಾಗುತ್ತಿರುವ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ವಿದಾಯ ಭಾಷಣ ಮಾಡಿದ ಗುಲಾಂ ನಬಿ ಆಜಾದ್, ‘ಪಾಕಿಸ್ತಾನಕ್ಕೆ ತೆರಳದ ಅದೃಷ್ಟವಂತರಲ್ಲಿ ನಾನೂ ಒಬ್ಬ. ಪಾಕಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಓದಿದಾಗ, ನಾನೊಬ್ಬ ಹಿಂದು ಸ್ತಾನಿ ಮುಸ್ಲಿಮನಾಗಿರುವುದಕ್ಕೆ ಹೆಮ್ಮೆಯಿದೆ’ ಎಂದು ಹೇಳಿದ್ದರು.