Wednesday, 1st December 2021

ವಿಜಯದಶಮಿಯಂದು ಶಸ್ತ್ರ ಪೂಜೆ ನೆರವೇರಿಸಿದ ರಾಜನಾಥ್ ಸಿಂಗ್

ಸುಕ್ನಾ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾನುವಾರ ಡಾರ್ಜಿಲಿಂಗ್ ಜಿಲ್ಲೆಯ ಸುಕ್ನಾದಲ್ಲಿರುವ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.

ವಿಜಯದಶಮಿ ಅಂಗವಾಗಿ ಶಸ್ತ್ರ ಪೂಜೆ ನೆರವೇರಿಸಿದ ರಾಜನಾಥ್ ಸಿಂಗ್, ಸುಕ್ನಾ ಸೇನಾ ನೆಲೆಯಲ್ಲಿ ಭಾರತೀಯ ಸೇನೆಯ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಗೆ ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಸಿಂಗ್, ಭಾರತ ಯಾವತ್ತಿಗೂ ತನ್ನ ನೆರೆಯ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತದೆ.

ಕಾಲ ಕಾಲಕ್ಕೆ ತನ್ನ ದೇಶದ ಸಾರ್ವಭೌಮತ್ಯ ಮತ್ತು ಪ್ರಾಂತೀಯ ಐಕ್ಯತೆಯನ್ನು ಕಾಪಾಡಲು ಸರ್ವಶ್ರೇಷ್ಟ ತ್ಯಾಗಗಳನ್ನು ಮಾಡಲು ನಮ್ಮ ಸೇನೆ ಹಿಂಜರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.