ಬೆಂಗಳೂರು: ಸಚಿವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವ ಆರೋಪದ ಮೇಲೆ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ.
ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜು ಎನ್ನುವವರ ವಿರುದ್ಧ ಸಿಸಿಬಿಯಲ್ಲಿ ಹಲವು ದೂರುಗಳು ದಾಖಲಾಗಿದ್ದವು. ಅಲ್ಲದೇ ತಮ್ಮ ಹೆಸರು ದುರ್ಬಳಕೆ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕೂಡ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಸಿಸಿಬ ಅಧಿಕಾರಿಗಳು ಗುರುವಾರ ಸಚಿವ ಶ್ರೀರಾಮುಲು ಅವರ ಮನೆಯ ಬಳಿಯಲ್ಲಿ ರಾಜು ಅವರನ್ನು ಬಂಧಿಸಿದ್ದಾರೆ.
ಇನ್ನು ಬಂಧಿತ ರಾಜು ಹಲವು ವರ್ಷಗಳಿಂದ ಶ್ರೀರಾಮುಲು ಹಾಗೂ ರೆಡ್ಡಿ ಕುಟುಂಬದ ಜೊತೆ ಗುರುತಿಸಿಕೊಂಡಿದ್ದರು.