Saturday, 24th October 2020

ಸಚಿವ ಎಸ್.ಸುರೇಶ್ ಕುಮಾರ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಕೋವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಎಸ್.ಸುರೇಶ್ ಕುಮಾರ್ ಗುಣಮುಖ ರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸಚಿವ ಸುರೇಶ್ ಅವರಿಗೆ ಅಕ್ಟೋಬರ್ 5ರಂದು ಕೋವಿಡ್ ಪಾಸಿಟಿವ್ ವರದಿಯಾಗಿತ್ತು. ಹೋಮ್ ಐಸೋಲೇಶನ್ ನಲ್ಲಿದ್ದ ಅವರು  ಅಕ್ಟೋಬರ್ 10ರಂದು ಆಸ್ಪತ್ರೆಗೆ ದಾಖಲಾಗಿದ್ದು. ಶನಿವಾರ ರಾತ್ರಿ ಮನೆಗೆ ಮರಳಿದ್ದಾರೆ.

ಈ ಬಗ್ಗೆ ಸ್ವತಃ ಸಚಿವರು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.  ಕಳೆದ ಎಂಟು ದಿನಗಳಿಂದ ನನಗೆ ಎಲ್ಲಾ ರೀತಿಯ ಚಿಕಿತ್ಸೆ ನೀಡಿ, ಶುಶ್ರೂಷೆ ಮಾಡಿ ನನ್ನನ್ನು ಗುಣಮುಖನಾಗುವ ಹಾದಿಗೆ ತಂದ ಡಾ. ಶಶಾಂಕ್, ಡಾ. ಶ್ರೀನಾಥ್, ಡಾ. ಪೂರ್ಣ ಪ್ರಸಾದ್, ಡಾ. ಕೃಪೇಶ್ ಮತ್ತು ಎಲ್ಲಾ ದಾದಿಯರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ನನಗೆ ಇನ್ನೂ ಎರಡು ವಾರಗಳ ಕಾಲ ಮನೆಯಿಂದ ಹೋಗಬಾರದು ಎಂಬ ಷರತ್ತಿನ ಮೇಲೆ ನನ್ನನ್ನು ಬಿಡುಗಡೆ ಮಾಡಿದ್ದಾರೆ. ನಾನು ಡಾಕ್ಟರ್ ಮಾತು ಪಾಲಿಸುತ್ತೇನೆ ಎಂದು ಮಾತು ಕೊಟ್ಟು ಮನೆ ಸೇರಿದ್ದೇನೆ. ಮನೆಯಲ್ಲಿ ಕೆಲ ಚಿಕಿತ್ಸೆ‌ ಮುಂದು ವರೆಯಲಿದ ಎಂದು ಸಚಿವರು ಹೇಳಿದ್ದಾರೆ.

Leave a Reply

Your email address will not be published. Required fields are marked *