Sunday, 27th November 2022

ಶಾಸಕ ಅಖಂಡ ಸಹೋದರ ಸಂಬಂಧಿಗೆ ಜಾಮೀನು ಮಂಜೂರು

ಬೆಂಗಳೂರು : ಡಿಜೆ ಹಳ್ಳಿ ಗಲಭೆಗೆ ಪ್ರಕರಣದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಹೋದರ ಸಂಬಂಧಿ ನವೀನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನವೀನ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಯ ಜೀವಕ್ಕೆ ಅಪಾಯವಿದೆ ಅನ್ನುವ ಕಾರಣಕ್ಕೆ ಜಾಮೀನು ನೀಡದೇ ಇದ್ದರೆ, ಆತನ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರು ಜಾಮೀನು ನೀಡಿ ತೀರ್ಪು ನೀಡಿದ್ದಾರೆ.