Friday, 24th March 2023

ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆ: ತಾಯಿ, ಮಗಳ ಸಾವು

ಬೆಂಗಳೂರು: ಸ್ನಾನದ ಕೊಠಡಿಯಲ್ಲಿದ್ದ ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ತಾಯಿ, ಮಗಳು ಮೃತಪಟ್ಟಿದ್ದಾರೆ. ಚಿಕ್ಕಬಾಣಾವರದ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ.

ಸ್ಥಳೀಯ ನಿವಾಸಿ ಮಂಗಳಾ(35) ಹಾಗೂ ಅವರ ಮಗು ಗೌತಮಿ (7) ಮೃತರು. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರದ ಮಂಗಳಾ, ಪತಿ ನರಸಿಂಹಮೂರ್ತಿ ಜೊತೆ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿ ದ್ದರು. ಚಿಕ್ಕಬಾಣಾವರದ ಬಾಡಿಗೆ ಮನೆಯಲ್ಲಿ ನೆಲೆಸಿ ದ್ದರು. ನರಸಿಂಹಮೂರ್ತಿ ಅವರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಗೌತಮಿಗೆ ಸ್ನಾನ ಮಾಡಿಸಲು ಮಂಗಳಾ ಹೋಗಿದ್ದರು. ಗ್ಯಾಸ್ ಗೀಸರ್ ಆನ್ ಮಾಡಿ ಬೀಸಿನೀರಿನಿಂದ ಸ್ನಾನ ಮಾಡಿಸುತ್ತಿದ್ದರು. ಇದೇ ಸಂದರ್ಭದಲ್ಲೇ ಗೀಸರ್‌ನಿಂದ ಕಾರ್ಬನ್‌ ಮೋನಾಕ್ಸೈಡ್ ಸೋರಿಕೆಯಾಗಿ, ಉಸಿರಾ ಡಲು ಸಾಧ್ಯವಾಗದೇ ತಾಯಿ-ಮಗಳು ಪ್ರಜ್ಞೆ ತಪ್ಪಿ ಬಿದ್ದಿದ್ದರು.’

ಮನೆಯಿಂದ ಹೊರಗೆ ಬರುತ್ತಿದ್ದ ಮಂಗಳಾ, ಸಂಜೆಯಾದರೂ ಮನೆಯಿಂದ ಹೊರಗೆ ಬಂದಿರಲಿಲ್ಲ. ಏನಾಯಿ ತೆಂದು ಕೇಳಲು ಮಾಲೀಕರು ಮನೆಯೊಳಗೆ ಹೋಗಿದ್ದಾಗಲೇ ವಿಷಯ ಗೊತ್ತಾಗಿದೆ. ತಾಯಿ-ಮಗಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ತಿಳಿಸಿವೆ.

error: Content is protected !!