Tuesday, 7th December 2021

ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ಆತ್ಮಹತ್ಯೆ

ಕಲಬುರಗಿ: ಪಂಚಶೀಲ ನಗರದಲ್ಲಿ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

27 ವರ್ಷದ ದೀಕ್ಷಾ ಶರ್ಮಾ ಕೃತ್ಯ ಎಸಗಿದ ಮಹಿಳೆ. ದೀಕ್ಷಾ ಅವರ ಎರಡು ವರ್ಷದ ಪುತ್ರಿ ಸಿಂಚನಾ ತಾಯಿಯೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.  4 ವರ್ಷದ ಪುತ್ರ ಧನಂಜಯ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ದೀಕ್ಷಾ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮಕ್ಕಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಳಗಿ ತಾಲೂಕಿನ ದೀಕ್ಷಾ ಅವರನ್ನು ಇಲ್ಲಿನ ಪಂಚಶೀಲ ನಗರದ ವಸಂತ ಶರ್ಮಾಗೆ ಐದು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು‌. ಆದರೆ, ದೀಕ್ಷಾಗೆ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಮತ್ತು ತವರು‌ ಮನೆಗೆ ಕಳುಹಿಸುತ್ತಿರ ಲಿಲ್ಲ ಎನ್ನಲಾಗಿದೆ.

ಸೋಮವಾರ ಕೂಡ ತವರು ಮನೆಗೆ ಹೋಗಲು ದೀಕ್ಷಾ ತಯಾರಿ ಆಗಿದ್ದಳು. ಆದರ, ಗಂಡನ ಮನೆಯಲ್ಲಿ ಅವಕಾಶ ನೀಡಿರ ಲಿಲ್ಲ. ಇದರಿಂದ ಬೇಸತ್ತು ಮಧ್ಯಾಹ್ನ ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲೇ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ‌.

ವಿಷಯ ತಿಳಿದು ದೀಕ್ಷಾ ತವರು‌ ಮನೆಯವರು ಹಾಗೂ ಸ್ಪೇಷನ್ ಬಜಾರ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.