Friday, 27th May 2022

ಮುರ್ಡೇಶ್ವರದ ಶಿವನ ವಿಗ್ರಹ ‘ಐಸಿಸ್ ಮ್ಯಾಗ್ಝೀನ್’ನಲ್ಲಿ; ವಿಗ್ರಹದ ಶಿರಭಾಗ ಕತ್ತರಿಸಿ ಐಸಿಸ್ ಧ್ವಜದ ಚಿತ್ರ ಹಾಕಿರುವ ಮತಾಂಧರು !

ಶಿರಸಿ/ಭಟ್ಕಳ: ದೇಶದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುರ್ಡೇಶ್ವರದ ಶಿವನ ಬೃಹತ್ ಪ್ರಯಿಮೆಯ ಮೇಲೆ ಐಸಿಸ್ ಉಗ್ರರ ಕಣ್ಣು ಬಿದ್ದಿದೆ ಎಂಬ ಭಯಾನಕ ಮಾಹಿತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಕುರಿತು ಟ್ವೀಟ್ ಮತ್ತು ಫೇಸ್ಬುಕ್ ಪೋಸ್ಟ್ ಹಾಕಿರುವ ಅನ್ಷುಲ್ ಸಕ್ಸೇನಾ ಎಂಬ ಯುವಕ, ಐಸಿಸ್ ಮ್ಯಾಗ್ಜೀನ್ ಆಗಿರುವ ‘the VOICE OF HIND’ನಲ್ಲಿ ಮುರ್ಡೇಶ್ವರದ ಶಿವನ ಪ್ರತಿಮೆಯ ಪೋಟೋ ಹಾಕಿದ್ದು, ಅದರ ಮೇಲೆ ‘Its time to Break False Gods’ ಎಂ ಬರಹವನ್ನು ಹಾಕಲಾಗಿದೆ. ಜೊತೆಗೆ ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ, ಅದರ ತುತ್ತ ತುದಿಗೆ ಐಸಿಸ್ ರೀತಿಯ ಧ್ವಜ ಹಾರಾಡುವಂತೆ ಚಿತ್ರಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಈ ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಪೋಟೋ ಮತ್ತು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ಸಂಬಂಧಿಸಿದ ಇಲಾಖೆ ಕ್ರಮವಹಿಸಬೇಕು ಮತ್ತು ಇಂತಹ ದುಷ್ಕೃತ್ಯಕ್ಕೆ ಸರಕಾರ ಅವಕಾಶ ನೀಡಬಾರದು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

***

ಐ.ಎಸ್.ಐ.ಎಸ್ ISIS ಉಗ್ರ ಸಂಘಟನೆಯ “ವಯ್ಸ್ ಒಪ್ ಹಿಂದ್” VOICE OF HIND ಎಂಬ ಪತ್ರಿಕೆಯೊಂದು ನಮ್ಮ ಮುರ್ಡೇಶ್ವರ ದೇವಸ್ಥಾನದ ಶಿವನ ಮೂರ್ತಿಯನ್ನು ಕೆಡವುಂತೆ ತನ್ನ ಮುಖಪುಟದಲ್ಲಿ ಘೋಷಣೆ ಮಾಡಿಕೊಂಡಿರುವುದು ಸಾಮಾಜಿಕ ಜಾಲತಾಣದ ಮೂಲಕ ನನ್ನ ಗಮನಕ್ಕೆ ಬಂದಿದೆ.

ಹಿಂದೂ ದೇವಾಲಯಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ನಮ್ಮ ಪಕ್ಷದ ತತ್ವ ಮತ್ತು ಸಿದ್ಧಾಂತಗಳಲೊಂದಾಗಿದೆ. ಉಗ್ರ ಸಂಘಟನೆಯ ಹೆಡೆಮುರಿಕಟ್ಟಲು ನಮ್ಮ ರಕ್ಷಣಾ ಇಲಾಖೆಯು ಸದೃಢ ಮತ್ತು ಸಶಕ್ತವಾಗಿದೆ. ಇಂತಹ ಪೊಳ್ಳು ಬೆದರಿಕೆಗೆ ಹೆದರುವ ಆಡಳಿತ ವ್ಯವಸ್ಥೆ ಈಗಿಲ್ಲ. ಈ ಸಂಬಂಧ ಈಗಾಗಲೇ ಗೃಹ ಮಂತ್ರಿ ಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ನೀಡಲಾಗಿದ್ದು, ಶೀಘ್ರವೇ ಮುಖತಃ ಬೇಟಿಯಾಗಿ ಮುರ್ಡೇಶ್ವರ ದೇವಸ್ಥಾನದ ಸುತ್ತ ಮುತ್ತ ಹೆಚ್ಚಿನ ಭದ್ರತೆ ವದಗಿಸಲು ಕ್ರಮ ವಹಿಸಲಾಗುವುದು.

ಸುನೀಲ್ ನಾಯ್ಕ್, ಶಾಸಕರು, ಭಟ್ಕಳ ವಿಧಾನಸಭಾ ಕ್ಷೇತ್ರ