Friday, 12th August 2022

ಮೈಸೂರಿನಲ್ಲಿ ನಳಿನ್ ಕುಮಾರ್ ಕಟೀಲ್ ಮತಯಾಚನೆ

ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಮೈಸೂರಿನಲ್ಲಿ ಮತಯಾಚನೆ ಮಾಡಿದರು.

ಮೈಸೂರಿನ ಎಕ್ಸೆಲ್ ಸಾಫ್ಟ್ ಕಂಪನಿಗೆ ಭೇಟಿ ನೀಡಿ, ಅಲ್ಲಿನ ಮತದಾರರಲ್ಲಿ ಪಕ್ಷದ ಅಭ್ಯರ್ಥಿಯಾಗಿರುವ ಮೈ.ವಿ.ರವಿಶಂಕರ್ ರವರಿಗೆ ಮೊದಲ ಪ್ರಾಶಸ್ತ್ಯ ದ ಮತಗಳನ್ನು ಹಾಕುವ ಮೂಲಕ ಅವರನ್ನು ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.

ಈ ವೇಳೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಂಸದ ಪ್ರತಾಪ್ ಸಿಂಹ, ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ನಗರ ವಕ್ತಾರ ಮೋಹನ್, ಅಭ್ಯರ್ಥಿ ಮೈ.ವಿ.ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.