Friday, 24th March 2023

ಮುಂದಿನ‌ ವರ್ಷ ಅದ್ದೂರಿ ದಸರಾ: ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು : ಪ್ರಸಕ್ತ ಸಾಲಿನ ದಸರಾ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಮುಂದಿನ‌ ವರ್ಷ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.

ಸಿಎಂ, ದಸರಾ ಯಶಸ್ಸಿಗೆ ಸಹಕರಿಸಿದ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆ ಸಲ್ಲಿಸಿದರು. ದಸರಾ ಸಂಧರ್ಭದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೆಜನ ನೀಡುತ್ತೇವೆ. ದಸರಾ ವಸ್ತು ಪ್ರದರ್ಶನವನ್ನು 365 ದಿನ ಬಳಕೆ ಮಾಡಲು ಚಿಂತನೆ ನಡೆಸಿದ್ದು, ಆ ಬಗ್ಗೆ ಮಾತುಕತೆ ನಡೆಸುತ್ತೇನೆ ಎಂದರು.

ನಾಳೆಯಿಂದ ನಾಲ್ಕು‌ ದಿನಗಳ‌ ಕಾಲ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತಿದ್ದು, ಎರಡು‌ ದಿನ ಹಾನಗಲ್, ಎರಡು ದಿನ‌ ಸಿಂದಗಿಯಲ್ಲಿ ಪ್ರಚಾರ ನಡೆಸುವುದಾಗಿ ತಿಳಿಸಿದರು. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುತ್ತಾರೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

error: Content is protected !!