Friday, 27th May 2022

ಉಳ್ಳಾಲದ ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್‌ಐಎ ದಾಳಿ

ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ನಿವಾಸಕ್ಕೆ ಬುಧವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗು ತ್ತಿದೆ. ನಾಲ್ಕು ಕಾರುಗಳಲ್ಲಿ 25 ಮಂದಿಯ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ.‌ ಜತೆಗೆ ಮಂಗಳೂ ರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ.‌

ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್​ಗಳನ್ನು ಸಬ್​ಸ್ಕ್ರೈಬ್ ಮಾಡಿ, ಮೃದುಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಎನ್‌ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.

ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜತೆ ವಾಸವಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಪುತ್ರಿಯೊಬ್ಬಳು ಕೇರಳದಲ್ಲಿ ನಾಪತ್ತೆ ಯಾಗಿದ್ದು, ಐಸಿಸ್ ಸಂಘಟನೆ ಸೇರಿದ್ದಾಗಿ ಹೇಳಲಾಗಿತ್ತು.