Thursday, 11th August 2022

ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್

ಬೆಂಗಳೂರು: ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ನಡೆಯಲಿರುವ ಚುನಾ ವಣಾ ಕಣ ರಂಗೇರಿದೆ.

ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್ ಪುನರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿದರೆ, ನಟ ಜಗ್ಗೇಶ್, ಲೆಹರ್ ಸಿಂಗ್ ಅವರು ಕೂಡ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಇಬ್ಬರೂ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಮೊದಲಾದವರು ಹಾಜರಿದ್ದರು.

ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆಗೆ ಮುನ್ನ ನಟ ಜಗ್ಗೇಶ್ ಮತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ದೇವರ ಮೊರೆ ಹೋದರು. ನಿರ್ಮಲಾ ಸೀತಾರಾಮನ್ ಅವರು ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಟ ಜಗ್ಗೇಶ್ ತಮ್ಮ ಆರಾಧ್ಯ ದೈವ ರಾಯರ ಮೊರೆ ಹೋದರು.