Friday, 27th May 2022

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಬಸವರಾಜ ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಭಾನುವಾರ ಧಾರವಾಡ ದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಎಸ್ ಐ ಟಿ ಸಿಡಿ ತನಿಖೆಯನ್ನು ನಿಸ್ಪಕ್ಷಪಾತ, ನಿಷ್ಠೂರ, ನ್ಯಾಯ ಸಮ್ಮತ ವಾಗಿ ನಡೆಸುತ್ತಿದೆ ಎಂದು ಅವರು ಸ್ಪಷ್ಟ ಪಡಿಸಿದರು.

ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸ ಲಾಗುತ್ತಿದೆ. ಶಾಲಾ ಕಾಲೇಜುಗಳ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳು ತ್ತವೆ. ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ. ಬದಲಿಗೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.

***

ಎರಡು ವಿಧಾನಸಭೆ ಹಾಗೂ ಒಂದು ಲೋಕಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ. ಈ‌ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ದಾಖಲೆ ಮತಗಳಿಂದ ಜಯ ಗಳಿಸಲಿದ್ದಾರೆ.

– ಬಸವರಾಜ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ