Friday, 9th December 2022

ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಮಂಗಳೂರು : ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯವು ನಟಿ ಪದ್ಮಜಾ ರಾವ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

ನಟಿ ಪದ್ಮಜಾ ಅವರು ವ್ಯಕ್ತಿಯೊಬ್ಬರಿಗೆ ನೀಡಿದ್ದ ಚೆಕ್ ಬೌನ್ಸ್ ಪ್ರಕರಣ ಸಂಬಂಧ ಗುರುವಾರ ಮಂಗಳೂರಿನ ಜೆಎಂಎಫ್ ಸಿ 5ನೇ ನ್ಯಾಯಾಲಯ ವಿಚಾರಣೆ ನಡೆಸಿತು. ಪ್ರಕರಣದಲ್ಲಿ ನಟಿ ಪದ್ಮಜಾ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ.