Wednesday, 26th January 2022

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಓವೈಸಿ ತಿರುಗೇಟು…!

ಹೈದರಾಬಾದ್‌: ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್‌ಗೆ ಹೇಳಿದ್ದು ಮಹಾತ್ಮ ಗಾಂಧಿ,” ಎಂಬ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್‌ ಓವೈಸಿ, ಬಿಜೆಪಿಯು ಶೀಘ್ರದಲ್ಲೇ ಸಾವರ್ಕರ್‌ ಅನ್ನು ರಾಷ್ಟ್ರಪಿತ ಎಂದು ಘೋಷಣೆ ಮಾಡುತ್ತದೆ,” ಎಂದು ತಿರುಗೇಟು ನೀಡಿರುವ ನೀಡಿದ್ದಾರೆ.

ರಾಜನಾಥ್‌ ಸಿಂಗ್‌ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಎಐಎಂ ಐಎಂ ಮುಖ್ಯಸ್ಥ ಅಸಾದುದ್ಧೀನ್‌ ಓವೈಸಿ, “ಬಿಜೆಪಿಯು ವಿಕೃತವಾದ ಇತಿಹಾಸವನ್ನು ಪ್ರಸ್ತುತ ಪಡಿಸುತ್ತಿದೆ. ಹೀಗೆಯೇ ಮುಂದುವರಿದರೆ ಶೀಘ್ರದಲ್ಲೇ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಬದಲಾಗಿ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಆರೋಪ ಹೊತ್ತಿರುವ ಸಾವರ್ಕರ್‌ ಅನ್ನು ದೇಶದ ಪಿತಾಮಹ ಎಂದು ಹೇಳುತ್ತಾರೆ,” ಎಂದು ಓವೈಸಿ ದೂರಿದ್ದಾರೆ.

ಹಿಂದುತ್ವದ ಐಕಾನ್‌ ಆದ ವೀರ ಸಾರ್ವಕರ್‌ ಅಂಡಮಾನ್‌ ಜೈಲಿನಲ್ಲಿ ಇದ್ದಾಗ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಸಾವರ್ಕರ್‌ಗೆ ಹೇಳಿದ್ದು ಮಹಾತ್ಮ ಗಾಂಧೀಜಿ,” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಂಗಳವಾರ ಹೇಳಿಕೊಂಡಿದ್ದರು.