Wednesday, 1st December 2021

ಬಿಹಾರದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಅಖಾಡಕ್ಕೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಕಣ ರಂಗು ಪಡೆದುಕೊಳ್ಳಲಿದೆ. ಚುನಾವಣಾ ಪ್ರಣಾಳಿಕೆ ಬಿಡುಗಡೆಯಾದ ಮರು ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ.

ಬಿಹಾರದಲ್ಲಿ ಶುಕ್ರವಾರ ಮೂರು ಕಡೆಗಳಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಭರ್ಜರಿ ರ್ಯಾಲಿ ನಡೆಸಲಿರುವ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಬಿಹಾರ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ)ದ ಅಭ್ಯರ್ಥಿಗಳ ಪರವಾಗಿ ಪ್ರಧಾನಮಂತ್ರಿ ಅವರು 12 ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಬಿಹಾರ ಚುನಾವಣೆಯ ಬಿಜೆಪಿ ಉಸ್ತುವಾರಿ ವಹಿಸಿಕೊಂಡಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿ ದ್ದಾರೆ.

ಮೂರು ಹಂತಗಳಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ಘೋಷಿಸಲಾಗಿದೆ. ಪ್ರಧಾನಮಂತ್ರಿ ಮೊದಲ ಬಾರಿಗೆ ಅಕ್ಟೋಬರ್. 23ರಂದು ಸಸಾರಮ್, ಗಯಾ, ಭಗಲ್ಪುರ್ ನಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಅಕ್ಟೋಬರ್.28ರಂದು ದರ್ಭಂಗಾ, ಮುಜಾ ಫರ್ ಪುರ್ ಮತ್ತು ಪಾಟ್ನಾದಲ್ಲಿ ಪ್ರಧಾನಿ ಮೋದಿ ರ್ಯಾಲಿ ನಡೆಸಲಿದ್ದಾರೆ. ನವೆಂಬರ್.03ರಂದು ಛಪ್ರಾ, ಪೂರ್ವ ಚಂಪಾರಣ್, ಸಮಸ್ತಿಪುರ್ ನಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.