Monday, 6th February 2023

ಇಸ್ರೇಲಿ ನಿರ್ದೇಶಕ ಪರ ನಟ ಪ್ರಕಾಶ್ ರಾಜ್ ಬ್ಯಾಟಿಂಗ್‌

ಪಣಜಿ: ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರಶಸ್ತಿ ವಿಭಾಗದ ಜ್ಯೂರಿಯಾಗಿದ್ದ ಇಸ್ರೇಲಿ ನಿರ್ದೇಶಕ ನದಾಲ್, ಭಾರತದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದು ಇದಕ್ಕೆ ನಟ ಪ್ರಕಾಶ್ ರಾಜ್ ಕೂಡ ನಿರ್ದೇಶಕನ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಸ್ವರ ಭಾಸ್ಕರ್, ‘ಸತ್ಯ ಏನು ಅನ್ನುವುದು ಸ್ಪಷ್ಟವಾಗಿ ಜಗತ್ತಿಗೆ ಅರ್ಥವಾಗಿದೆ’ ಎಂದು ಬರೆದುಕೊಂಡಿದ್ದರು. ಸ್ವರ ಭಾಸ್ಕರ್ ಮಾತಿಗೂ ಕೆಲವರು ಆಕ್ಷೇಪ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ಸ್ವರ ಪರವಾಗಿಯೇ ಮಾತನಾಡಿದ್ದರು. ಪ್ರಕಾಶ್ ರಾಜ್ ಕೂಡ ಕೊನೆಗೂ ಸತ್ಯ ಅಧಿಕೃತವಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.

ಸ್ವರ ಭಾಸ್ಕರ್ ಮತ್ತು ಪ್ರಕಾಶ್ ರಾಜ್ ನಿಲುವನ್ನು ಅನೇಕರು ಪ್ರಶ್ನಿಸಿದ್ದಾರೆ. ನೀವು ಕಾಶ್ಮೀರಿ ಪಂಡಿತರಿಗೆ ಅವಮಾನ ಮಾಡುತ್ತಿದ್ದೀರಿ ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಗೋವಾದಲ್ಲಿ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೋಮವಾರ (ನವೆಂಬರ್ 28) ಅದ್ದೂರಿಯಾಗಿ ನಡೆದಿತ್ತು. ಮುಕ್ತಾಯ ಸಮಾರಂಭದಲ್ಲಿ ತೀರ್ಪುಗಾರರ ಮುಖ್ಯಸ್ಥರಾಗಿದ್ದ ಇಸ್ರೇಲ್‌ನ ನಿರ್ದೇಶಕ ನದಾವ್ ಲಾಪಿಡ್ ದಿ ಕಾಶ್ಮಿರ್ ಫೈಲ್ಸ್ ಸಿನಿಮಾ ವಿರುದ್ಧ ಅಸಮಾಧಾನ ಹೊರಹಾಕಿದರು.

error: Content is protected !!