Friday, 27th May 2022

ವೆಂಕಟಸುಬ್ಬಯ್ಯನವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ: ಸಚಿವ ಬೊಮ್ಮಾಯಿ

ಗೃಹ ಸಚಿವರ ಸಂತಾಪ

ಬೆಂಗಳೂರು: ಕನ್ನಡ ಸಾರಸ್ವತ ಲೋಕದ ಧೀಮಂತ, ಹಿರಿಯ ಸಂಶೋಧಕ, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಶತಾಯುಷಿಗಳು. ತಮ್ಮ ಸುದೀರ್ಘ ಬದುಕನ್ನು ಕನ್ನಡಕ್ಕಾಗಿಯೇ ಮೀಸಲಿಟ್ಟಿದ್ದ ಕನ್ಮಡದ ಕಟ್ಟಾಳು. ನಿಘಂಟು ರಚನೆ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ವೆಂಕಟಸುಬ್ಬಯ್ಯ ಅವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಎಂದು‌ ಅವರು ಕಂಬನಿ ಮಿಡಿದಿದ್ದಾರೆ.

ನಿಘಂಟು ಅಷ್ಟೇ ಅಲ್ಲದೇ ಸಾಹಿತ್ಯ, ಸಂಶೋದನೆ, ವಿಮರ್ಶೆ, ಅನುವಾದ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಅವರು ಕನ್ಮಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತ ಗೊಳಿಸಿದ್ದರು. ಹೀಗಾಗಿ ನಡೆ ದಾಡುವ ನಿಘಂಟು, ಶಬ್ದಬ್ರಹ್ಮ ಎಂಬ ಬಿರುದುಗಳಿಗೆ ಪ್ರೊ. ವೆಂಕಟಸುಬ್ಬಯ್ಯ ಪಾತ್ರರಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಬಡವಾಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಶೋಕ ವ್ಯಕ್ತಪಡಿಸಿದ್ದಾರೆ.

ಅವರ ಅಗಲಿಕೆಯ ದುಃಖ ವನ್ನು ಎದುರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ. ಪ್ರೊ.ಜಿ.ವಿ.ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.