Sunday, 25th September 2022

ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ

ನವದೆಹಲಿ: ಜಿಮ್‌ ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ ಸಂಭವಿಸಿದೆ.

ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ರಾಜು ಶ್ರೀವಾಸ್ತವ್ ಅವರ ಆರೋಗ್ಯ ಗಂಭೀರವಾಗಿದೆ. ತುರ್ತು ಚಿಕಿತ್ಸಾ ವೈದ್ಯರ ತಂಡ ನಟನನ್ನು ಕಾರ್ಡಿಯಾಕ್‌ ಯೂನಿಟ್‌ಗೆ ಶಿಫ್ಟ್‌ ಮಾಡಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ.

ವೈದ್ಯರ ಪ್ರಕಾರ ‘ಶ್ರೀವಾಸ್ತವ ಅವರ ಆಂಜಿಯೋಗ್ರಫಿಯಲ್ಲಿ ಶೇ. 100 ಬ್ಲಾಕೇಜ್‌ ಕಂಡು ಬಂದಿದೆ. ಸದ್ಯ ಅವರು ವೆಂಟಿಲೇಟರ್‌ ಸಹಾಯದಲ್ಲಿದ್ದಾರೆ. ಅವರ ಸ್ಥಿತಿಯೂ ಗಂಭೀರ ವಾಗಿದೆ’ ಎಂದು ತಿಳಿಸಿದೆ.