ಬೆಳಗಾವಿ: ಕರೋನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ.
ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ಅವರು, ಏ.4ರಂದು ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢವಾಗಿತ್ತು.
ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.
ಬಿಪಿ, ಶುಗರ್ ಇದೀಗ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಮಾಡಿ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಕರೆದುಕೊಂಡು ಬಂದರು. ರಮೇಶ್ ಜಾರಕಿಹೊಳಿ ಅವರು ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿ ಹೋಂ ಕ್ವಾರಂಟೈನ್ ಆಗಲಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ