Friday, 3rd February 2023

ಕಂದಾಯ ದಾಖಲೆಗಳು ನೇರವಾಗಿ ರೈತರ ಮನೆ ಬಾಗಿಲಿಗೆ: ಸಚಿವ ಆರ್.ಅಶೋಕ

ರಾಯಚೂರು: ಕಂದಾಯ ಇಲಾಖೆಯಲ್ಲಿ ಹಲವು ವಿನೂತನ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದೆ. ಕಂದಾಯ ದಾಖಲೆಗಳನ್ನು ನೇರವಾಗಿ ರೈತರ ಮನೆಬಾಗಿಲಿಗೇ ತಲುಪಿಸುವ ಯೋಜನೆಯಿಂದ ರಾಜ್ಯದ ಲಕ್ಷಾಂತರ ರೈತರಿಗೆ ಅನುಕೂಲ ವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಹೇಳಿದರು.

ಅವರು ಅ.15 ರ0ದು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಿಯ ಮಹಾತ್ಮ ಗಾಂಧೀಜಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ್ದ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಜನಸ್ನೇಹಿ, ಜನೋಪಯೋಗಿ ಹಾಗೂ ವಿವಿಧ ಇಲಾಖೆಯ ಸೌಲಭ್ಯಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಂದಾಯ ಇಲಾಖೆಯ ದಾಖಲೆಯನ್ನು ಪಡೆಯುವುದು ಪ್ರತಿಯೊಬ್ಬರ ಹಕ್ಕು. ಆ ಹಕ್ಕನ್ನು ಅತ್ಯಂತ ಸರಳ ರೀತಿಯಲ್ಲಿ ಪಡೆಯಲು ಈ ಮಹತ್ವದ ಯೋಜನೆ ಸಹಕಾರಿಯಾಗಲಿದೆ. ಕಳೆದ ಎರಡು ವರ್ಷದಿಂದ ಗ್ರಾಮ ವಾಸ್ತವ್ಯ ಮಾಡ್ತಿದ್ದೇನೆ. ಜನರ ಜೊತೆ ಕೂತು ಮಾತನಾಡಿದರೇ, ಮನೆ ಬಾಗಿಲಿಗೆ ಪರಿಹಾರ ಸಿಗತ್ತೆ. ಲಂಬಾಣಿ ತಾಂಡಾ, ಕುರುಬರ ಹಟ್ಟಿ ಬಗ್ಗೆ ಯಾವ ಸರ್ಕಾರಗಳು ಗಮನ ಹರಿಸಿರ್ಲಿಲ್ಲ. ನಮ್ಮ ಸರ್ಕಾರಿಂದ ಅವುಗಳನ್ನ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದೆ. ಕಲ್ಯಾಣ ಕರ್ನಾಟಕದ 60 ಸಾವಿರ ಜನಕ್ಕೆ, ಸ್ಪಾಟ್ ನಲ್ಲೇ ಹಕ್ಕು ಪತ್ರ ನೀಡುತ್ತೇವೆ. ರಾಜ್ಯಾದ್ಯಂತ 1.5 ಲಕ್ಷ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತೆ ಎಂದರು.

17 ಹುದ್ದೆಗಳು ಮಂಜೂರು ಮಾಡುವ ಮೂಲಕ ಅರಕೇರಿಯ ತಾಲೂಕು ಆಡಳಿತ ಪರಚಣ ಆರಂಭಾಗಲಿದ್ದು ಅರಕೆರೆ ಗ್ರಾಮಕ್ಕೆ ಸುಮಾರು ಒಂದು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮವಿಲ್ಲದ ಇದ್ದರೆ ನಾನು ಈ ಗ್ರಾಮಕ್ಕೆ ಬರುತ್ತಿದ್ದಿಲ್ಲ.

75 ವರ್ಷಗಳಲ್ಲಿ ಯಾವ ಕಂದಾಯ ಸಚಿವರು ಬಂದಿಲ್ಲ ನಾನೇ ಫಸ್ಟ್ ಎಂದು ಇಲ್ಲಿ ಸ್ಥಳೀಯ ಶಾಸಕರು ಹೇಳುತ್ತಿದ್ದಾರೆ. ಗ್ರಾಮೀಣ ಜನರು ಜಿಲ್ಲಾಧಿಕಾರಿ ಕಚೇರಿಗೆ ಹೋಗಲು ಅವರಿಗೆ ಆಗೋದಿಲ್ಲ. ಅವರ ಸಮಸ್ಯೆ ಗಳಿಗೆ ಸ್ಪಂದಿಸಲು ಈ ಕಾರ್ಯಕ್ರಮ ಜಾರಿಗೆ ತರಲಾಗಿದು,್ದ ಎಲ್ಲರೂ ಈ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಬಹುದೆಂದು ಹೇಳಿದರು.

ಈ ವೇಳೆ ಸಂಸದ ರಾಜಾ ಅಮರೇಶ್ವರ ನಾಯಕ ಅವರು ಮಾತನಾಡಿ, ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಜಿಲ್ಲಾಧಿಕಾರಿ ನಡೆದ ಹಳ್ಳಿ ಕಡೆ ಯೋಜನೆಯು ಮಹತ್ವಕಾಂಕ್ಷೆಯಾಗಿದ್ದು ಪ್ರತಿಯೊಬ್ಬರೂ ಸದುಪಯೋಗ ಪಡೆಯಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದ ಹಲವಾರು ಯೋಜನೆಗಳು ನೇರವಾಗಿ ಶೇಕಡ 75 ರಷ್ಟು ಜನರಿಗೆ ತಲುಪಿಸಲಾಗುತ್ತದೆ ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಬಂದ0ತ ಯೋಜನೆಗಳನ್ನು ಬಹು ಕಾಲ ಉಪಯೋಗ ಮಾಡಿಕೊಳ್ಳಬೇಕು. ಜಿಲ್ಲೆಯ ಪ್ರತಿ ಮನೆಮನೆಗೂ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಜಲಜೀವನ್ ಯೋಜನೆ ಕೈಗೊಳ್ಳಲಾಗಿದ್ದು ಅತಿ ಶೀಘ್ರದಲ್ಲೇ ಯೋಜನೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಈ ವೇಳೆ ಶಾಸಕ ಕೆ.ಶಿವನಗೌಡ ನಾಯಕ ಅವರು ಮಾತನಾಡಿ, ಕಂದಾಯ ಸಚಿವರ ಆಗಮನದಿಂದ ಅನೇಕ ಬಡವರಿಗೆ ಸರ್ಕಾರದ ಸೌಲಭ್ಯಗಳು ದೊರಕಲಾಗಿದೆ. ಅರಕೇರಾ ಗ್ರಾಮವನ್ನು ತಾಲೂಕು ಕೇಂದ್ರವಾಗಿ ಒಳ್ಳೆ ಉದ್ದೇಶಕ್ಕಾಗಿ ಮಾಡಲಾಗಿದ್ದು, ಇದರಿಂದ ಅನೇಕ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಸಿರವಾರ, ಮಾನ್ವಿ ಹಾಗೂ ಅರಕೇರಾ ತಾಲೂಕು ಕೇಂದ್ರಗಳಿಗೆ ಕಟ್ಟಡದ ಅವಶ್ಯಕತೆ ಇದ್ದು, ಕಂದಾಯ ಸಚಿವರು ತಾಲೂಕು ಕಚೇರಿ ನಿರ್ಮಾಣಕ್ಕೆ ಕ್ರಮ ವಹಿಸುವಂತೆ ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ಗಬ್ಬೂರು ಗ್ರಮಾವನ್ನು ತಾಲೂಕ ಕೇಂದ್ರವಾಗಿ ಮಾಡಲು ಆ ಭಾಗದ ಜನರ ಒತ್ತಡ ಇದ್ದು, ಸಚಿವರು ಈ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಿದರು. ಅಲ್ಲದೆ ಈ ಭಾಗದಲ್ಲಿ ಸುಮಾರು 30 ತಾಂಡಗಳು ಹಾಗೂ 200 ಹೆಚ್ಚು ದೊಡ್ಡಿಗೊಳಿದ್ದು, ಅವುಗಳನ್ನು ಕಂದಾಯ ಗ್ರಾಮವಾಗಿ ಮಾಡುವಂತೆ ಎಂದು ಸಚಿವರಿಗೆ ಶಾಸಕರು ಮನವಿ ಮಾಡಿದರು.

ಈ ಭಾಗದಲ್ಲಿ ಅತಿ ಹೆಚ್ಚು ಬಡವರಿದ್ದು ಅವರ ಆರೋಗ್ಯದ ದೃಷ್ಟಿಯಿಂದ ಉತ್ತಮ ಚಿಕಿತ್ಸೆ ಪಡೆದುಕೊಳ್ಳಲು ಜಿಲ್ಲೆಗೆ ಎಮ್ಸ್ ಮಂಜೂರಿ ಮಾಡಲು ಸಚಿವರು ಸಹಕಾರ ನೀಡುವಂತೆ ಶಾಸಕರು ಕೋರಿದರು.

ಇದಕ್ಕೂ ಮುಂಚೆ ರಾಯಚೂರು ನಗರದ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ್, ಸುರಪುರ ಶಾಸಕ ರಾಜುಗೌಡ ಅವರು ಮಾತನಾಡಿದರು.

ಮಸ್ಥರಿಂದ ಸಚಿವರಿಗೆ ಅದ್ದೂರಿ ಸ್ವಾಗತ: ಜಿಲ್ಲೆಯ ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷ ವಾಕ್ಯದಡಿ ಆಯೋಜಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಇಂದು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ವಾಸ್ತವ್ಯಕ್ಕಾಗಿ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಪೂರ್ಣ ಕುಂಭಮೇಳದೊ0ದಿಗೆ ಸ್ವಾಗತಿಸಿದರು. ಗ್ರಾಮಕ್ಕೆ ಭೇಟಿ ನೀಡಿದ ಸಚಿವರನ್ನು ಹಳ್ಳಿಯ ಸೊಗಡನ್ನು ಪ್ರತಿಬಿಂಬಿಸುವ ಡೊಳ್ಳಿನ ಮೂಲಕ ಗ್ರಾಮದೊಳಗೆ ಮೆರವಣಿಗೆ ಸಮೇತ ಕರೆತರಲಾಯಿತು.

1853 ಅರ್ಜಿಗಳ ಸಲ್ಲಿಕೆ, ಸ್ಥಳದಲ್ಲೇ 508 ಅರ್ಜಿಗಳ ಇತ್ಯರ್ಥ: ಅರಕೇರಾ ಗ್ರಾಮಸ್ಥರು ಸೇರಿದಂತೆ ದೇವದುರ್ಗ ತಾಲ್ಲೂಕಿನ ವಿವಿಧ ಗ್ರಾಮಸ್ಥರಿಂದ ಈ ವೇಳೆ ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಯಿತು. ಕಂದಾಯ, ಗ್ರಾಮ ಪಂಚಾಯತಿ, ಆಹಾರ, ಲೋಕೋಪಯೋಗಿ, ಭೂ ಮಾಪನ, ಕೃಷಿ, ತೋಟಗಾರಿಕೆ, ಶಿಕ್ಷಣ, ಪಶುಸಂಗೋಪನೆ, ವಿಕಲಚೇತನ ಸೇರಿದಂತೆ ಹಲವು ಇಲಾಖೆಗಳಿಗೆ ಸಂಬAಧಿಸಿದAತೆ ಒಟ್ಟು 1853 ಅರ್ಜಿ ಸಲ್ಲಿಕೆಯಾಗಿದ್ದು, ಸ್ಥಳದಲ್ಲೇ 508 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದ್ದು, ಉಳಿದ 1345 ಅರ್ಜಿಗಳನ್ನು ಅದಷ್ಟು ಬೇಗನೆ ಇತ್ಯರ್ಥ ಪಡಿಸಲಾಗುವುದು ಎಂದು ದೇವದುರ್ಗ ತಹಸೀಲ್ದಾರ್ ಶ್ರೀನಿವಾಸ ಚಾಪೆಲ್ ಅವರು ತಿಳಿಸಿದರು.

ವಿವಿಧ ಯೋಜನೆ, ಕಾರ್ಯಕ್ರಮಗಳ ಕುರಿತು ಜಾಗೃತಿ; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ಸಿಗುವ ಸೌಲಭ್ಯಗಳ ಕುರಿತು ಜಾಗೃತಿ, ಆಯುಷ್ ಇಲಾಖೆಯಿಂದ ಐ.ಇ.ಸಿ ತರಬೇತಿ ಮತ್ತು ಆರೋಗ್ಯ ಕಾರ್ಯಕ್ರಮ ಎಸ್.ಸಿ.ಪಿ.ಮತ್ತು ಟಿ.ಎಸ್.ಪಿ.ಪುರಸ್ಕೃತ ಯೋಜನೆ, ಕೋವಿಡ್-19ರ, ಮಲೇರಿಯಾ, ಡೆಂಗ್ಯೂ ತಡೆಗಟ್ಟಲು ತೆಗೆದುಕೊಳ್ಳಬಹುದಾದ ಕ್ರಮಗಳು, ಮೆದುಳು ಜ್ವರ, 2025ರ ವೇಳೆಗೆ ಕ್ಷಯರೋಗ ನಿರ್ಮೂಲನೆ ಮಾಡುವ ಗುರಿ, ಬಾಯಿ ಆರೋಗ್ಯ ಶಿಬಿರ,9 ಸೇರಿದಂತೆ ಇತರೆ ಇಲಾಖೆಗಳ ಯೋಜನೆ ಹಾಗೂ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಈ ವೇಳೆ ವಿವಿಧ ಇಲಾಖೆಯ ಯೋಜನೆಗಳ ಹಾಗೂ ಕಾರ್ಯಕ್ರಮಗಳಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಚೆಕ್ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಶಾಸಕರಾದ ರಾಜುಗೌಡ, ಅರಕೇರಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾಗಮ್ಮ, ಎ.ಪಿ.ಎಮ್.ಸಿ ಅಧ್ಯಕ್ಷ ಅಚುತ್ ರೆಡ್ಡಿ, ಕಲ್ಬುರ್ಗಿ ಕಂದಾಯ ವಿಭಾಗದ ಆಯುಕ್ತ ಕೃಷ್ಣ ಭಾಜಪೋ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಶಶಿಧರ್ ಕುರೇರ್, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ರಾಯಚೂರು ಸಹಾಯಕ ಆಯುಕ್ತ ರಂಜನಿಕಾ0ತ್, ಲಿಂಗಸೂಗೂರು ಸಹಾಯಕ ಆಯುಕ್ತ ರಾಹುಲ್ ಸಂಕನೂರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

error: Content is protected !!