Sunday, 14th August 2022

ಖಾಸಗಿ ಶಾಲೆ ಆರಂಭಿಸುವ ನಿರ್ಧಾರ ಕೈಬಿಟ್ಟ ರುಪ್ಸಾ

ಬೆಂಗಳೂರು : ಕರೋನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿ ಆ.2ರಿಂದ ಖಾಸಗಿ ಶಾಲೆ ಗಳನ್ನು ಆರಂಭಿಸಲು ನಿರ್ಧರಿಸಿದ್ದ ರುಪ್ಸಾ (RUPSA) ಸಂಘಟನೆ ಶಾಲೆ ಆರಂಭಿಸುವ ನಿರ್ಧಾರವನ್ನು ಕೈ ಬಿಟ್ಟಿದೆ. ಸಿಎಂ ಬಸವರಾಜ ಬೊಮ್ಮಾನಿ ಸೂಚನೆ ಮೇರೆಗೆ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರುಪ್ಸಾ ಸಂಘಟನೆ ಅಧ್ಯಕ್ಷ ಹಾಲನೂರು ಲೇಪಾಕ್ಷಿ, ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯದಲ್ಲಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

ಶಾಲೆ ಆರಂಭದ ಬಗ್ಗೆ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಕರೆ ಮಾಡಿದ್ದಾರೆ. ಸಿಎಂ ಭೇಟಿ ಮಾಡಿ ಶಾಲೆ ಆರಂಭದ ಬಗ್ಗೆ ಚರ್ಚೆ ನಡೆಸಲಾಗು ವುದು. ಶಾಲೆಗಳ ಆರಂಭದ ಬಗ್ಗೆ ದುಡುಕಿನ ನಿರ್ಧಾರ ಬೇಡ ಎಂದು ಸಿಎಂ ಹೇಳಿದ್ದಾರೆ.

ಹೀಗಾಗಿ ನಾಳೆಯಿಂದ ಖಾಸಗಿ ಶಾಲೆಗಳ ಆರಂಭದ ನಿರ್ಧಾರ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.