Friday, 24th September 2021

ಎಸ್.ಆರ್.ವಿಶ್ವನಾಥ್ ಟಿಟಿಡಿ ಸದಸ್ಯರಾಗಿ ನೇಮಕ

ಬೆಂಗಳೂರು: ಆಂಧ್ರಪ್ರದೇಶದ ಪ್ರತಿಷ್ಠಿತ ತಿರುಮಲ ತಿರುಪತಿ ಟ್ರಸ್ಟ್ ಗೆ ಕರ್ನಾಟಕದ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಸದಸ್ಯರನ್ನಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಯಲಹಂಕ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅವರನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹಿಂದೆ ಬೆಂಗಳೂರಿನ ತಿರುಮಲ ತಿರುಪತಿ ಟ್ರಸ್ಟ್‌ ನ ಸ್ಥಳೀಯ ಸಲಹಾ ಮಂಡಳಿಯ ಉಪಾಧ್ಯಕ್ಷರಾಗಿ ವಿಶ್ವನಾಥ್ ಅವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ತಮ್ಮನ್ನು ಈ ಹುದ್ದೆಗೆ ನೇಮಕ ಮಾಡಿರುವುದಕ್ಕೆ ವಿಶ್ವನಾಥ್ ಅವರು ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಮತ್ತು ಆಂಧ್ರಪ್ರದೇಶ ಸರ್ಕಾರದ ಪಂಚಾಯತ್ ರಾಜ್ ಮತ್ತು ಗಣಿ ಸಚಿವ ರಾಮಚಂದ್ರರೆಡ್ಡಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಈ ಹುದ್ದೆಗೆ ನನ್ನನ್ನು ನೇಮಕ ಮಾಡಿರುವುದಕ್ಕೆ ಹರ್ಷವೆನಿಸಿದೆ. ತಿರುಮಲ ಕ್ಷೇತ್ರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾಧಿಗಳಿಗೆ ಸೇವೆ ಸಲ್ಲಿಸುವ ಅದೃಷ್ಠ ನನ್ನದಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *