Saturday, 10th April 2021

ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು

ಮುಂಬೈ: ಕ್ರಿಕೆಟ್ ದೇವರು, ಮಾಸ್ಟರ್‌ ಬ್ಲಾಸ್ಟರ್‌ ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಹೋಂ ಕ್ವಾರಂಟೈನ್ ನಲ್ಲಿದ್ದರು. ವೈದ್ಯರ ಸಲಹೆ ಮೇರೆಗೆ ಇದೀಗ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಸ್ವತ: ಸಚಿನ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *