Sunday, 14th August 2022

ಇಂದು ಜಾಗೃತಿ ಅಭಿಯಾನ, ಸಲ್ಯೂಟ್ ವಾರಿಯರ್ಸ್‌ ಆಲ್ಬಂ ಸಾಂಗ್ ಬಿಡುಗಡೆ

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಚಿತ್ರದುರ್ಗ ಸಹಯೋಗದೊಂದಿಗೆ ಮಾತೃಭೂಮಿ ಎಂಟರ್ಪ್ರೈಸಸ್ ಮಾತರಂ ಲ್ಯಾಪ್ ಕ್ರಿಯೇಷನ್ ಇವರಿಂದ ಕರೋನಾ 3ನೇ ಅಲೆಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಜಾಗೃತಿ ಅಭಿಯಾನ ಸಲ್ಯೂಟ್ ವಾರಿಯರ್ಸ್ ಕನ್ನಡ ವಿಡಿಯೋ ಆಲ್ಬಂ ಬಿಡುಗಡೆ ಹಾಗೂ ಕೋವಿಡ್ ವಾರಿಯರ್ಸ್ ಸನ್ಮಾನ ಕಾರ್ಯಕ್ರಮವನ್ನು ಆ.10ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ತ.ರಾ.ಸು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಪ್ರೇಮಾವತಿ ಮನಗೂಳಿ ಅವರು ಕಾರ್ಯಕ್ರಮ ಉದ್ಘಾಟಿಸು ವರು. ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ. ರಾಧಿಕಾ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ. ನಂದಿನಿ ದೇವಿ ಉಪಸ್ಥಿತಿ ವಹಿಸುವರು. ಸಲ್ಯೂಟ್ ವಾರಿಯರ್ಸ್ ಆಲ್ಬಂ ಕ್ರಿಯೇಟಿವ್‍ಹೆಡ್ ನಿರ್ದೇಶನ ಮಾಲತೇಶ್ ಅರಸ್ ಹರ್ತಿಕೋಟೆ ಪ್ರಾಸ್ತಾವಿಕ ನುಡಿಗಳಾಡುವರು.

ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್. ರಂಗಸ್ವಾಮಿ, ಉಪ ವಿಭಾಗಧಿಕಾರಿ ಚಂದ್ರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ರಂಗನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸವರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ, ತಹಶೀಲ್ದಾರ್ ಸತ್ಯನಾರಾಯಣ, ನಗರಸಭೆ ಆಯುಕ್ತ ಜೆ.ಟಿ. ಹನುಮಂತರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಂ. ಎಸ್. ಸೋಮಶೇಖರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶಶಿಧರ್ ನೀಲಗಾರ್, ಗೃಹರಕ್ಷಕದಳದ ಜಿಲ್ಲಾ ಕಮಾಂಡರ್ ಸಿ.ಕೆ. ಸಂಧ್ಯಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಧನಂಜಯ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್. ಅವಿನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಮತಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಕೆ.ಎಸ್. ರಾಜಾನಾಯ್ಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.