Wednesday, 5th October 2022

ನಿಷೇಧ ಭೀತಿಯಲ್ಲಿ ಸಂಜು ಸ್ಯಾಮ್ಸನ್ ?

ದುಬೈ: ನಿಧಾನಗತಿಯ ಓವರ್‌ ರೇಟ್‌ಗಾಗಿ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೇಲೆ ₹24 ಲಕ್ಷ ದಂಡ ಹೇರಲಾಗಿದೆ.

ಇನ್ನೀಗ ಸಂಜು ಸ್ಯಾಮ್ಸನ್ ನಿಷೇಧದ ಭೀತಿಯನ್ನು ಎದುರಿಸುತ್ತಿದ್ದಾರೆ. ಕಾರಣ, ಸತತ ಎರಡನೇ ಬಾರಿಗೆ ಓವರ್‌ರೇಟ್ ಕಾಯ್ದುಕೊಳ್ಳುವಲ್ಲಿ ಸಂಜು ವಿಫಲ ರಾಗಿರುವುದು. ಶನಿವಾರ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 33 ರನ್ ಅಂತರದ ಸೋಲಿಗೆ ಶರಣಾಗಿತ್ತು.

ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲೂ ನಿಧಾನಗತಿಯ ಓವರ್‌ರೇಟ್‌ಗಾಗಿ ಸಂಜು ಮೇಲೆ ₹12 ಲಕ್ಷ ದಂಡ ವಿಧಿಸಲಾಗಿತ್ತು.

ಐಪಿಎಲ್ ನಿಯಮಾವಳಿಗಳ ಪ್ರಕಾರ,  ಈಗ ಮೂರನೇ ಬಾರಿಯೂ ತಪ್ಪು ಪುನರಾವರ್ತನೆಯಾದರೆ ₹30 ಲಕ್ಷ ದಂಡ ಸಹಿತ ಮುಂದಿನ ಒಂದು ಪಂದ್ಯ ನಿಷೇಧ ಶಿಕ್ಷೆ ಎದುರಿಸಬೇಕಾಗುತ್ತದೆ.