Tuesday, 21st March 2023

ಶಶಿಕಲಾ ಬಿಡುಗಡೆ ಇಂದು

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಂಧಿಯಾಗಿರುವ ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ, ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬುಧವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಕೋವಿಡ್ ಸೋಂಕಿಗೆ ಒಳಗಾಗಿರುವ ಶಶಿಕಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮೂಲಗಳು ಹೇಳಿವೆ. ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು, 63 ವರ್ಷದ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಎಲ್ಲಾ ಪ್ರಕ್ರಿಯೆಗಳನ್ನು ಆಸ್ಪತ್ರೆಯಲ್ಲಿಯೇ ಪೂರ್ಣಗೊಳಿಸಲಾಗುವುದು.

ಶಶಿಕಲಾ ಬಿಡುಗಡೆಯಾಗುವ ಮೊದಲೇ ಜನವರಿ 20ರಂದು ಶಶಿಕಲಾಗೆ ಕೋವಿಡ್ 19 ಸೋಂಕು ತಗುಲಿತ್ತು. ನಂತರ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

 

error: Content is protected !!