Tuesday, 26th October 2021

ಶಾಲಾ ಕಟ್ಟಡ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಪಂ ಸಿಇಒ ಸೂಚನೆ

ಕೊಪ್ಪಳ: ಶಾಲಾ ಕಟ್ಟಡ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಎಂದು ಕೊಪ್ಪಳ ಜಿಪಂ ಸಿಇಒ ಫೌಜಿಯಾ ತರನ್ನುಮ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ  ಶಾಲಾ ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆ.ಕೆಆರ್.ಡಿ.ಬಿ/ ಡಿ.ಎಮ್.ಎಫ್ ಮತ್ತು ವಿವಿಧ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಗಳ ಶಾಲಾ ಕಟ್ಟಡಗಳ ಕಾಮಗಾರಿಗಳನ್ನು ಸಂಬಂಧಿಸಿದ ಏಜನ್ಸಿಗಳು ತ್ವರಿತವಾಗಿ ಪೂರ್ಣಗೊಳಿಸಬೇಕು.  ಅಲ್ಲದೇ ಕಟ್ಟಡ ಕಾಮಗಾರಿಯು ಗುಣಮಟ್ಟ ದಿಂದ ಮಾಡಿ.  ನಿಗದಿತ ಅವಧಿಯೊಳಗೆ ನೂತನ ಕಟ್ಟಡಗಳನ್ನು ಶಿಕ್ಷಣ ಇಲಾಖೆಗೆ ಹಸ್ತಾಂತರಗೊಳಿಸಬೇಕು ಎಂದರು.

ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಕ್ರಮ ವಹಿಸಬೇಕಾಗಿದ್ದು, ಶಾಲಾ ಕೊಠಡಿಗಳ ದುರಸ್ಥಿ, ಕಂಪೌಡ್ ನಿರ್ಮಾಣ, ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವುದು, ಆಟದ ಮೈದಾನ, ಶೌಚಾಲಯ ಹೀಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದಲ್ಲದೇ ಉತ್ತಮ ವಾತಾ ವರಣ ಸೃಷ್ಠಿಸಬೇಕು.  ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಅಮೀನಸಾಬ, ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ, ಪಿ.ಆರ್.ಇ.ಡಿ, ಕೆ.ಆರ್.ಐ.ಡಿ.ಎಲ್ ನಿರ್ಮಿತಿ ಕೇಂದ್ರದ ಮುಖ್ಯಸ್ಥರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *